ಹೊಸದಿಗಂತ ಡಿಜಿಟಲ್ ಡೆಸ್ಕ್:
ದ್ವೇಷ ಭಾಷಣ ಮಾಡಿದ ಆರೋಪದ ಮೇಲೆ ಬಿಜೆಪಿ ನಾಯಕ ಮಿಥುನ್ ಚಕ್ರವರ್ತಿ ವಿರುದ್ಧ ಪಶ್ಚಿಮ ಬಂಗಾಳ ಪೊಲೀಸರು ಮಂಗಳವಾರ ಕ್ರಿಮಿನಲ್ ಪ್ರಕರಣ ದಾಖಲಿಸಿದ್ದಾರೆ.
ಸಾಲ್ಟ್ ಲೇಕ್ ನಿವಾಸಿ ಕೌಶಿಕ್ ಸಹಾ ಅವರು ಸಲ್ಲಿಸಿದ ದೂರಿನಲ್ಲಿ ಅಕ್ಟೋಬರ್ 27 ರಂದು ಭಾಷಣ ಮಾಡಿದ ಮಿಥುನ್ ಚಕ್ರವರ್ತಿ ಹಿಂಸಾಚಾರವನ್ನು ಪ್ರಚೋದಿಸಿದ್ದಾರೆ.ಕೋಮು ದ್ವೇಷವನ್ನು ಉತ್ತೇಜಿಸಿದ್ದಾರೆ ಎಂದು ಆರೋಪಿಸಿದ್ದಾರೆ.
ಭಾರತೀಯ ನ್ಯಾಯ ಸಂಹಿತೆಯ ಅಡಿ ಸೆಕ್ಷನ್ 192(ಗಲಭೆ ಉಂಟುಮಾಡಲು ಪ್ರಚೋದನೆ) ಮತ್ತು ಸೆಕ್ಷನ್ 196(ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು) ಸೇರಿದಂತೆ ಬಿಎನ್‌ಎಸ್ ಬಹು ವಿಭಾಗಗಳ ಅಡಿಯಲ್ಲಿ ಪೊಲೀಸರು ಪ್ರಕರಣವನ್ನು ದಾಖಲಿಸಿದ್ದಾರೆ.
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಪಕ್ಷದ ಸದಸ್ಯತ್ವ ಅಭಿಯಾನವನ್ನು ಪ್ರಾರಂಭಿಸಿದ ಬಿಜೆಪಿ ಸಮಾರಂಭದಲ್ಲಿ ಮಿಥುನ್ ಚಕ್ರವರ್ತಿ ದ್ವೇಷ ಭಾಷಣ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.