ಅಕ್ರಮ ಆಸ್ತಿ ಗಳಿಕೆ ಆರೋಪ: ಡಿಕೆಶಿ ಆಪ್ತ ವಿಜಯ್ ಕುಮಾರ್ ಗೆ ಸಿಬಿಐ ನೋಟಿಸ್

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಆಪ್ತರಾಗಿರುವ ವಿಜಯ್ ಕುಮಾರ್ ಮುಳುಗುಂದ್ ಅವರಿ​ಗೆ ಅಕ್ರಮ ಆಸ್ತಿ ಗಳಿಕೆ ಆರೋಪದ ಮೇಲೆ ಆಗಸ್ಟ್​ 30ರಂದು ವಿಚಾರಣೆಗೆ ಗಂಗಾನಗರದಲ್ಲಿರುವ ಸಿಬಿಐ ಕಚೇರಿಗೆ ಹಾಜರಾಗುವಂತೆ ಸಿಬಿಐ ನೋಟಿಸ್ ನೀಡಿದೆ.

2020 ಅಕ್ಟೋಬರ್‌ 5 ರಂದು ಡಿಕೆಶಿ ಮನೆ, ಕಚೇರಿ ಮತ್ತು ಆಪ್ತರ ಮನೆ ಮೇಲೆ ಸಿಬಿಐ ದಾಳಿ ನಡೆಸಿತ್ತು‌. ದಾಳಿ ಸಂಬಂಧ ವಿಚಾರಣೆಗೆ ಸಿಬಿಐ ಬುಲಾವ್ ನೀಡಿದೆ‌. ಇದೇ ವೇಳೆ ತಮ್ಮ ಕಂಪನಿಯ ಆದಾಯಕ್ಕೆ ಸಂಬಂಧಿಸಿದ ಎಲ್ಲಾ ದಾಖಲಾತಿಗಳನ್ನು ಹಾಜರುಪಡಿಸುವಂತೆ ಸೂಚಿಸಿದೆ.

74.93 ಕೋಟಿ ಅಕ್ರಮ ಆಸ್ತಿ ಸಂಪಾದನೆ ಆರೋಪದಡಿ‌ 2020ರಲ್ಲಿ ಡಿ ಕೆ ಶಿವಕುಮಾರ್ ಅವರ ಮನೆ ಹಾಗೂ ಕಚೇರಿಗಳ ಮೇಲೆ ಸಿಬಿಐ ಅಧಿಕಾರಿಗಳು ದಾಳಿ‌ ನಡೆಸಿ‌ ಪ್ರಕರಣ ದಾಖಲಿಸಿಕೊಂಡಿದ್ದರು. ಇದೇ ವೇಳೆ ವಿಜಯ್ ಕುಮಾರ್ ಅವರ ಮನೆ ಮೇಲೆ ದಾಳಿ ನಡೆಸಿದ್ದರು.‌

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!