ನೇಮಕಾತಿಯಲ್ಲಿ ಅಕ್ರಮ ಆರೋಪ: ದಂಡು ಮಂಡಳಿ ಕಚೇರಿ ಮೇಲೆ ಸಿಬಿಐ ಅಧಿಕಾರಿಗಳ ದಾಳಿ

ಹೊಸದಿಗಂತ ವರದಿ ಬೆಳಗಾವಿ:

ಕೇಂದ್ರದ ರಕ್ಷಣಾ ಇಲಾಖೆಯ ವ್ಯಾಪ್ತಿಗೆ ಒಳಪಡುವ ಬೆಳಗಾವಿಯ ದಂಡುಮಂಡಳಿ (ಕಂಟೋನ್ಮೆಂಟ್ ಬೋರ್ಡ್ ) ಕಚೇರಿ ಮೇಲೆ ಸಿಬಿಐ ಅಧಿಕಾರಿಗಳು ಶನಿವಾರ ದಿಢೀರ್ ದಾಳಿ ನಡೆಸಿದ್ದಾರೆ.
ದಂಡು ಮಂಡಳಿಯಲ್ಲಿ ನೇಮಕಾತಿ ಮಾಡಿಕೊಳ್ಳಲಾದ ವಿವಿಧ ಹುದ್ದೆಗಳ ಪ್ರಕ್ರಿಯೆಯಲ್ಲಿ ಅಕ್ರಮ ಎಸಗಿದ ದೂರಿನ ಹಿನ್ನೆಲೆಯಲ್ಲಿ ಈ ದಾಳಿ ನಡೆದಿದೆ ಎನ್ನಲಾಗಿದೆ.

ನಗರದ ಕ್ಯಾಂಪ್ ಪ್ರದೇಶದಲ್ಲಿರುವ ಈ ದಂಡು ಮಂಡಳಿ ಕಚೇರಿ ಮೇಲೆ ದಾಳಿ ನಡೆಸಿ ಕಂಟೋನ್ಮೆಂಟ್ ಬೋರ್ಡ್ ನ ಸಿಇಓ ಕೆ. ಆನಂದ ಸೇರಿದಂತೆ ಹಲವು ಅಧಿಕಾರಿಗಳನ್ನು ವಿಚಾರಣೆಗೆ ಒಳಪಡಿಸಲಾಗಿದೆ.
ದೆಹಲಿ ಹಾಗೂ ಬೆಂಗಳೂರಿನ ಸಿಬಿಐ ಅಧಿಕಾರಿಗಳ ತಂಡದವರು ಜಂಟಿಯಾಗಿ ಈ ದಾಳಿ ನಡೆಸಿದ್ದಾರೆ.
ನೇಮಕಾತಿಯಲ್ಲಿ ಅಕ್ರಮವಾಗಿದೆ ಎಂದು ಅಭ್ಯರ್ಥಿಯೊಬ್ಬರು ದೂರು ನೀಡಿದ್ದರು.

ಈ ಹಿನ್ನೆಲೆಯಲ್ಲಿ ಸಿಬಿಐ ಅಧಿಕಾರಿಗಳು ಏಕಕಾಲದಲ್ಲಿ ದಾಳಿ ನಡೆಸಿದ್ದಾರೆ. ರಾಜ್ಯದ ಏಕೈಕ ದಂಡುಮಂಡಳಿ ಕಚೇರಿ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಈ ಕಚೇರಿಯಲ್ಲಿ 2021ರಲ್ಲಿ 19 ಅಭ್ಯರ್ಥಿಗಳ ನೇಮಕಾತಿ ನಡೆದಿತ್ತು. ಈ ನೇಮಕಾತಿಯಲ್ಲಿಯೇ ಅಕ್ರಮ ಆರೋಪ ಕೇಳಿಬಂದಿದ್ದು, ಸಿಬಿಐ ತನಿಖೆಗೆ ಇಳಿದಿದೆ.

- Advertisement - Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!