ಸರ್ಕಾರಿ ವಕೀಲರ ನೇಮಕಾತಿ ಅಕ್ರಮದ ಆರೋಪ: ಇಲಾಖಾ ತನಿಖೆಗೆ ಸಿಎಂ ಸಿದ್ದರಾಮಯ್ಯ ಆದೇಶ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ರಾಜ್ಯದಲ್ಲಿ ಹಿಂದಿನ ಸರ್ಕಾರದ ಅವಧಿಯಲ್ಲಿ ನಡೆದ ಸಹಾಯಕ ಸರ್ಕಾರಿ ಅಭಿಯೋಜಕರು, ಸಹಾಯಕ ಸರ್ಕಾರಿ ವಕೀಲರ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ಆರೋಪ ಕೇಳಿಬಂದಿದ್ದು, ಕೂಡಲೇ ಇಲಾಖಾ ಹಂತದ ತನಿಖೆಯನ್ನು ಕೈಗೊಂಡು 10 ದಿನಗಳಲ್ಲಿ ವರದಿ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆದೇಶ ಹೊರಡಿಸಿದ್ದಾರೆ.

23 -07-22 ಮತ್ತು 24-07-22 ರಂದು ನಡೆದ ಸಹಾಯಕ ಸರ್ಕಾರಿ ಅಭಿಯೋಜಕರ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ನಡೆದಿದ್ದು, ಈ ಬಗ್ಗೆ ಮರುಪರೀಕ್ಷೆ ಮಾಡುವಂತೆ ಸಾಕಷ್ಟು ವಕೀಲ ಆಕಾಂಕ್ಷಿಗಳು ಮನವಿ ಮಾಡಿದ್ದರು. ಜೊತೆಗೆ, ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ಮಾಡಲಾಗಿದೆ ಎಂದು ದೂರುಗಳನ್ನು ನೀಡಿದ್ದರು. ಈ ಹಿನ್ನೆಲೆಯಲ್ಲಿ ಇಲಾಖಾ ತನಿಖೆಗೆ ಆದೇಶಿಸಿದ್ದಾರೆ.

ನೇಮಕಾತಿಯಲ್ಲಿ ವ್ಯಾಪಕ ಭ್ರಷ್ಟಾಚಾರ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ವರದಿ ಕೇಳಿದ್ದಾರೆ. ಈ ಸಂಬಂಧ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದು, ಅಕ್ರಮ ಎಸಗಿದ ತಪ್ಪಿತಸ್ಥರ ವಿವರದೊಂದಿಗೆ 10 ದಿನಗಳೊಳಗೆ ವರದಿ ಕೊಡುವಂತೆ ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!