ಮಕ್ಕಳ ಪೌಷ್ಟಿಕ ಆಹಾರ ಸರಬರಾಜಿನಲ್ಲಿ ಅಕ್ರಮ ಆರೋಪ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಲೋಕಾಯುಕ್ತಕ್ಕೆ ದೂರು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಲ್ಲಿ (Women and Child Welfare Department) ಭ್ರಷ್ಟಾಚಾರ (Corruption) ನಡೆದಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ (Lakshmi Hebbalkar) ವಿರುದ್ಧ ಲೋಕಾಯುಕ್ತ ಸಂಸ್ಥೆಗೆ ದೂರು ನೀಡಲಾಗಿದೆ.

ಮಕ್ಕಳ ಪೌಷ್ಟಿಕ ಆಹಾರ ಸರಬರಾಜಿನಲ್ಲಿ ಅಕ್ರಮ ನಡೆದಿದೆ. 600 ಕೋಟಿ ರೂಪಾಯಿಗೂ ಹೆಚ್ಚು ಮೊತ್ತದ ಭ್ರಷ್ಟಾಚಾರವಾಗಿದೆ ಎಂದು ವಕೀಲ ನಟರಾಜ ಶರ್ಮಾ ಲೋಕಾಯಕ್ತಕ್ಕೆ ನೀಡಿದ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಕಪ್ಪುಪಟ್ಟಿಯಲ್ಲಿರುವ ಕ್ರಿಸ್ಟಿ ಫ್ರೈಡ್ ಗ್ರಾಂ ಕಂಪನಿಗೆ ಟೆಂಡರ್ ನೀಡಲಾಗಿದೆ .ಗುತ್ತಿಗೆದಾರರಿಂದ ಅಂಗನವಾಡಿಗಳಿಗೆ ಪೂರೈಕೆಯಾಗುವ ಆಹಾರ ಗುಣಮಟ್ಟ ಇರುವುದಿಲ್ಲ. ಹೀಗಾಗಿ ಸ್ಥಳೀಯ ಸೇವಾ ಸಂಘಗಳೇ ಆಹಾರ ಪೂರೈಕೆ ಮಾಡುವಂತೆ ಹೈ ಕೋರ್ಟ್ ಆದೇಶ ನೀಡಿತ್ತು. ಆದರೆ, ಆದೇಶ ಉಲ್ಲಂಘನೆ ಮಾಡಿ ಕಪ್ಪು ಪಟ್ಟಿಯಲ್ಲಿರುವ ಪೂರೈಕೆ ಕಂಪನಿಗೆ ಟೆಂಡರ್ ನೀಡಿರುವುದಾಗಿ ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಪ್ರ. ಕಾರ್ಯದರ್ಶಿ ಜೆ.ಸಿ.ಪ್ರಕಾಶ್, ಇಲಾಖೆಯ ನಿರ್ದೇಶಕರ ವಿರುದ್ಧವೂ ಲೋಕಾಯುಕ್ತ ಸಂಸ್ಥೆಗೆ ದೂರು ನೀಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!