ಪರಶುರಾಮ ಥೀಮ್‌ ಪಾರ್ಕ್‌ ಕಾಮಗಾರಿಯಲ್ಲಿ ಅಕ್ರಮ ಆರೋಪ: ಸಿಐಡಿ ತನಿಖೆಗೆ ಸಿಎಂ ಆದೇಶ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಉಡುಪಿ ಜಿಲ್ಲೆಯ ಕಾರ್ಕಳದ ಬೈಲೂರಿನ ಪರಶುರಾಮ ಥೀಮ್‌ ಪಾರ್ಕ್‌ (parashurama theme park ಕಾಮಗಾರಿಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪಗಳು ಕೇಳಿಬರುತ್ತಿದ್ದು, ಈ ಹಿನ್ನೆಲೆ ಪ್ರಕರಣವನ್ನು ಸಿಐಡಿ ತನಿಖೆಗೆ(CID probe) ವಹಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಆರ್. ಹೆಬ್ಬಾಳ್ಕರ್ ಅವರ ಶಿಫಾರಸ್ಸಿನ ಮೇರೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಿಐಡಿ ತನಿಖೆಗೆ ಆದೇಶಿಸಿದ್ದಾರೆ.

ಪರಶುರಾಮ‌ ಥೀಮ್‌ ಪಾರ್ಕ್‌ ಕಳಪೆ ಕಾಮಗಾರಿ ಹಾಗೂ ಅವ್ಯವಹಾರದ ಆರೋಪ ಕೇಳಿ ಬಂದಿದ್ದು, ಹೀಗಾಗಿ ಸಿದ್ದರಾಮಯ್ಯ ಅವರು ಪ್ರಕರಣವನ್ನು ಸಿಐಡಿಗೆ ವಹಿಸಿದ್ದಾರೆ.

ಆದೇಶದಲ್ಲಿ ಏನಿದೆ?
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಮತ್ತು ಜಿಲ್ಲಾ ಉಸ್ತುವಾರಿ ಸಚಿವರು ಫೆ. 2ರಂದು ಬರೆದ ಪತ್ರದಲ್ಲಿ ಪರಶುರಾಮ ಥೀಂ ಪಾರ್ಕ್‌ ಕಾಮಗಾರಿಯಲ್ಲಿ ಭ್ರಷ್ಟಾಚಾರ ಹಾಗೂ ಕಳಪೆ ಕಾಮಗಾರಿ ನಡೆದ ಹಾಗೂ ಜನರ ಧಾರ್ಮಿಕ ಭಾವನೆಗಳಿಗೆ ಅಪಚಾರವಾಗುತ್ತಿರುವ ಬಗ್ಗೆ ಪರ-ವಿರೋಧ ಚರ್ಚೆಗಳು ನಡೆಯುತ್ತಿರುವ ಕುರಿತು ದೃಶ್ಯ ಮಾಧ್ಯಮ ಮತ್ತು ದಿನ ಪತ್ರಿಕೆಗಳು ವರದಿ ಮಾಡಿರುವುದು ತಿಳಿದುಬಂದಿದೆ. ಈ ಕುರಿತು ಸತ್ಯಾಸತ್ಯತೆಯನ್ನು ತಿಳಿದುಕೊಳ್ಳಲು ಸಿಒಡಿ ಅಥವಾ ಉನ್ನತ ಮಟ್ಟದ ತನಿಖೆ ನಡೆದಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ವಿನಂತಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಸಿಒಡಿ ತನಿಖೆಗೆ ಆದೇಶಿಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೊರಡಿಸಿರುವ ಆದೇಶದಲ್ಲಿ ಹೇಳಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!