ಮಹಿಳೆ ಜೊತೆ ಅನುಚಿತ ವರ್ತನೆ ಆರೋಪ: ನಟ ಶಿವರಾಜ್ ಕೆಆರ್ ಪೇಟೆ ವಿರುದ್ಧ ದೂರು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಕನ್ನಡ ಕಾಮಿಡಿ ಕಿಲಾಡಿ ಖ್ಯಾತಿಯ ಶಿವರಾಜ್ ಕೆಆರ್ ಪೇಟೆ ವಿರುದ್ಧ ದೂರು ದಾಖಲಾಗಿದೆ.

ರಾಜ್ ಕುಮಾರ್ ರಸ್ತೆಯ 10 ನೇ ಕ್ರಾಸ್ ನಲ್ಲಿ ಮಹಿಳೆ ಜೊತೆ ಕಿರಿಕ್ ಮಾಡಿದ ಆರೋಪ ಕೇಳಿಬಂದಿದ್ದು, ಈ ಹಿನ್ನೆಲೆ ಬೆಂಗಳೂರಿನ ಸುಬ್ರಮಣ್ಯ ಠಾಣೆಯಲ್ಲಿ ದೂರು ದಾಖಲಾಗಿದೆ.

ಮಹಿಳೆಯೊಬ್ಬರು ಸ್ಕೂಟರ್ ನಲ್ಲಿ ಹೋಗುತ್ತಿದ್ದಾಗ ಶಿವರಾಜ್ ಕೆ ಆರ್ ಪೇಟೆ ಬೈಕ್ ನಲ್ಲಿ ಬಂದ ಮಹಿಳೆ ಜೊತೆ ಅನುಚಿತವಾಗಿ ವರ್ತಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಕಾರು ಟಚ್ ಮಾಡಿ ನನಗೆ ನಿಂದಿಸಿದ್ದಾರೆ , ಅಲ್ಲದೇ ಸ್ನೇಹಿತರ ಜೊತೆ ಸೇರಿ ನನಗೆ ಬೈದಿದ್ದಾರೆ ಎಂದು ಮಹಿಳೆ ಆರೋಪಿಸಿ ದೂರು ದಾಖಲಿಸಿದ್ದಾರೆ.
ಶಾರದಾ ಬಾಯಿ ಎಂಬ ಮಹಿಳೆ ದೂರು ನೀಡಿದ್ದು, ಮಾ.30 ರಂದು ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಪ್ರಕರಣ ಸಂಬಂಧ ಇಬ್ಬರನ್ನು ಕರೆಸಿ ಪೊಲೀಸರು ವಿಚಾರಣೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!