ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೇಂದ್ರ ಸಚಿವೆ ನಿರ್ಮಲಾ, ನಳಿನ್ ಕುಮಾರ್ ಕಟೀಲು ಸೇರಿದಂತೆ ಮತ್ತಿತರರ ವಿರುದ್ಧದ ಚುನಾವಣಾ ಬಾಂಡ್ ಹೆಸರಿನಲ್ಲಿ ಸುಲಿಗೆ ಆರೋಪ ಪ್ರಕರಣದ ತೀರ್ಪನ್ನು ಹೈಕೋರ್ಟ್ ಏಕಸದಸ್ಯ ಪೀಠ ಕಾಯ್ದಿರಿಸಿದೆ.
ದೂರುದಾರ ಆದರ್ಶ್ ಅಯ್ಯರ್ ಪರ ಹಿರಿಯ ವಕೀಲ ಪ್ರಶಾಂತ್ ಭೂಷಣ್ ವಾದ ಮಾಡಿದ್ದರೆ, ನಳಿನ್ ಕುಮಾರ್ ಕಟೀಲು ಪರ ಹಿರಿಯ ವಕೀಲ ಕೆ.ಜಿ.ರಾಘವನ್ ಪ್ರತಿವಾದ ಮಾಡಿದರು.
ವಾದ ಪ್ರತಿವಾದ ಆಲಿಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಏಕಸದಸ್ಯ ಪೀಠದ ತೀರ್ಪು ಕಾಯ್ದಿರಿಸಿದೆ. ಇನ್ನು ಪ್ರಕರಣದ ತನಿಖೆಗೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ನೀಡಿದ್ದ ಆದೇಶಕ್ಕೆ ತಡೆಯಾಜ್ಞೆ ವಿಸ್ತರಿಸಿದೆ.