ಹೊಸದಿಗಂತ ಡಿಜಿಟಲ್ ಡೆಸ್ಕ್:
ಚೀನಾ ಪರ ಪ್ರಚಾರ, ಅಕ್ರಮ ಹಣ ವರ್ಗಾವಣೆ ಆರೋಪದ ಮೇಲೆ ಖಾಸಗಿ ವಾಹಿನಿ ನ್ಯೂಸ್‌ಕ್ಲಿಕ್ ಪತ್ರಕರ್ತರ ಮನೆ ಮೇಲೆ ದೆಹಲಿ ಪೊಲೀಸರು ದಾಳಿ ನಡೆಸಿದ್ದಾರೆ.
ಅಮೆರಿಕದ ಬಿಲೇನಿಯರ್ ನೆವಿಲ್ ರಾಯ್ ಸಿಂಘಮ್‌ರಿಂದ 38 ಕೋಟಿ ರೂಪಾಯಿ ಹಣ ಪಡೆದು ಭಾರತದಲ್ಲಿ ಚೀನಾ ಪರ ಪ್ರಚಾರ ಮಾಡುತ್ತಿದ್ದಾರೆ ಎನ್ನುವ ಆರೋಪ ಪತ್ರಕರ್ತರ ಮೇಲಿದೆ.
ಅಕ್ರಮ ಹಣ ವರ್ಗಾವಣೆ ಹಾಗೂ ಚೀನಾ ಪರವಾಗಿ ಮಾಧ್ಯಮದಲ್ಲಿ ಸುದ್ದಿ ಬಿತ್ತರಿಸಿದ ಆರೋಪದ ಮೇಲೆ ಇಡಿ ಪ್ರಕರಣ ದಾಖಲಿಸಿದ್ದು, ದೆಹಲಿ ಪೊಲೀಸರ ವಿಶೇಷ ಘಟಕ ನ್ಯೂಸ್‌ಕ್ಲಿಕ್ ಮಾಧ್ಯಮಕ್ಕೆ ಸಂಬಂಧಿಸಿದ ಎಲ್ಲ ಸ್ಥಳಗಳ ಮೇಲೆ ದಾಳಿ ನಡೆಸಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.