RCB ಪಂದ್ಯದ ವೇಳೆ‌ ಕಳಪೆ ಅಹಾರ ನೀಡಿದ ಆರೋಪ: ಕೆಎಸ್​ಸಿಎ ವಿರುದ್ಧ ಎಫ್​ಐಆರ್

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಐಪಿಎಲ್ ನಲ್ಲಿ ಡೆಲ್ಲಿ ಮತ್ತು ಬೆಂಗಳೂರು ನಡುವಿನ ಪಂದ್ಯದ ವೇಳೆ ಕಳಪೆ ಆಹಾರ ನೀಡಿದ್ದಾರೆ ಎಂದು ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (ಕೆಎಸ್​ಸಿಎ) ಮ್ಯಾನೇಜ್ ಮೆಂಟ್ ವಿರುದ್ಧ ಗಂಭೀರ ಆರೋಪ ಕೇಳಿಬಂದಿದೆ.

ಐಪಿಎಲ್​ನಲ್ಲಿ ಡೆಲ್ಲಿ ಮತ್ತು ಆರ್​ಸಿಬಿ ನಡುವೆ ಮೇ 12ರಂದು ಎಂ.ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದಿದ್ದ ಪಂದ್ಯದ ವೇಳೆ ಪ್ರೇಕ್ಷಕರಿಗೆ ಕಳಪೆ ಆಹಾರ ನೀಡಿದ್ದಾರೆ ಎಂದು ಆರೋಪಿಸಿ ಪ್ರೇಕ್ಷಕ ಚೈತನ್ಯ ಎನ್ನುವರು ವಿರುದ್ಧ ದೂರು ನೀಡಿದ್ದಾರೆ. ಈ ದೂರಿನ ಮೇರೆಗೆ ಕೆಎಸ್​ಸಿಎ ವಿರುದ್ಧ ಕಬ್ಬನ್ ಪಾರ್ಕ್ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿದೆ.

23 ವರ್ಷದ ಚೈತನ್ಯ ಕತಾರ್ ಏರ್ ವೇಸ್ ಫ್ಯಾನ್ಸ್ ಟರೇಸ್ ಸ್ಟ್ಯಾಂಡಿಗೆ ಕ್ಯಾಂಟಿನ್ ನಿಂದ ಊಟ ಸೇವಿಸಿದ್ದಾರೆ. ನಂತರ ಕೆಲವೇ ನಿಮಿಷಗಳಲ್ಲಿ ಆತನಿಗೆ ಹೊಟ್ಟೆ ನೋವು ಕಾಣಿಸಿಕೊಂಡಿದ್ದು, ಕುಳಿತುಕೊಂಡಿದ್ದ ಜಾಗದಲ್ಲಿಯೇ ಕುಸಿದುಬಿದ್ದಿದ್ದಾನೆ. ಕೂಡಲೇ ಸ್ಟೇಡಿಯಂ ಸಿಬ್ಬಂದಿ ಚೈತನ್ಯನನ್ನು ಆ್ಯಂಬುಲೆನ್ಸ್ ನಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ ಬಳಿಕ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ನಂತರ ವೈದ್ಯರು ತಪಾಸಣೆ ಮಾಡಿದ್ದು, ಫುಡ್ ಪಾಯಿಸನ್ ಆಗಿದೆ ಎಂದು ದೃಢಡಿಸಿದ್ದಾರೆ.

ಬಳಿಕ ಚೈತನ್ಯ ಅವರು ತಮ್ಮ ಆರೋಗ್ಯ ಹದಗೆಡಲು ಕ್ಯಾಂಟಿನ್​ನಲ್ಲಿ ನೀಡಿದ ಆಹಾರವೇ ಕಾರಣ ಎಂದು ಕೆಎಸ್​ಸಿಎ ಆಡಳಿತ ಮಂಡಳಿ ವಿರುದ್ಧ ಕಬ್ಬನ್ ಪಾರ್ಕ್ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಈ ದೂರಿನ ಅನ್ವಯ ಕೆಎಸ್​ಸಿಎ ವಿರುದ್ಧ ಎಫ್ಐಆರ್ ದಾಖಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!