ಲಂಚ ಪಡೆದ ಆರೋಪ: ಮೊಯಿತ್ರಾ ವಿರುದ್ಧ ತನಿಖೆಗೆ ಪ್ರಕರಣ ದಾಖಲಿಸಿಕೊಂಡ ಸಿಬಿಐ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಲೋಕಸಭೆಯಲ್ಲಿ ಪ್ರಶ್ನೆಗಳನ್ನು ಕೇಳಲು ಲಂಚ ಪಡೆದಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ತೃಣಮೂಲ ಕಾಂಗ್ರೆಸ್‌ ಪಕ್ಷದ (ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ‍ಪ್ರಾಥಮಿಕ ತನಿಖೆ ನಡೆಸಲು ಕೆಂದ್ರೀಯ ತನಿಖಾ ದಳ (ಸಿಬಿಐ) ಪ್ರಕರಣ ದಾಖಲಿಸಿಕೊಂಡಿದೆ.

ಲೋಕಪಾಲ್‌ ನಿರ್ದೇಶನದ ಮೇರೆಗೆ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಬಿಜೆಪಿ ಸಂಸದ ನಿಶಿಕಾಂತ್ ದುಬೆ ಅವರು ಮಹುವಾ ವಿರುದ್ಧ ಲೋಕಪಾಲ್‌ಗೆ ದೂರು ನೀಡಿದ್ದರು. ಅದರಂತೆ ಪ್ರಕರಣವನ್ನು ಸಿಬಿಐಗೆ ವರ್ಗಾಯಿಸಲಾಗಿತ್ತು.

ಲೋಕಸಭೆಯಲ್ಲಿ ಪ್ರಶ್ನೆ ಕೇಳಲು ಹಣ ಪಡೆದ ಆರೋಪದ ಅಡಿಯಲ್ಲಿ ‌ಮಹುವಾ ಅವರನ್ನು ಲೋಕಸಭೆಯಿಂದ ಉಚ್ಚಾಟಿಸಬೇಕು ಎಂದು ಲೋಕಸಭೆಯ ನೀತಿ ಸಮಿತಿಯು ಈಗಾಗಲೇ ಶಿಫಾರಸು ಮಾಡಿದೆ. ಆದರೆ, ಈ ಶಿಫಾರಸು ‘ಪೂರ್ವಗ್ರಹಪೀಡಿತ’ ಮತ್ತು ‘ದೋಷಪೂರಿತ’ವಾಗಿದೆ ಎಂದು ವಿರೋಧ ಪಕ್ಷಗಳ ಸದಸ್ಯರು ಕಿಡಿಕಾರಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!