October 13, 2026
Tuesday, October 13, 2026
spot_img

ಮದುವೆಯಾಗುವುದಾಗಿ ನಂಬಿಸಿ ಕೈಕೊಟ್ಟ ಆರೋಪ; ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಯುವತಿ

ಹೊಸದಿಗಂತ ವರದಿ ಹಾಸನ:

ಅಂತರ್ಜಾತಿ ವಿವಾಹಕ್ಕೆ ಪೋಷಕರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಪ್ರಿಯಕರ ಮದುವೆಯಾಗದೆ ನಾಪತ್ತೆಯಾಗಿದ್ದಾನೆ ಎಂದು ಆರೋಪಿಸಿ ಯುವತಿಯೊಬ್ಬಳು ನ್ಯಾಯಕ್ಕಾಗಿ ಅಂಗಲಾಚಿರುವ ಘಟನೆ ಬೆಳಕಿಗೆ ಬಂದಿದೆ.

ಚನ್ನರಾಯಪಟ್ಟಣ ತಾಲ್ಲೂಕಿನ ಕಲ್ಲೇಸೋಮಹಳ್ಳಿ ಗ್ರಾಮದ ಸೂರ್ಯ (26) ಹಾಗೂ ಕೇರಳದ ಕಾಸರಗೋಡು ಮೂಲದ ನಿಷ್ಮಾ (26) ಬೆಂಗಳೂರಿನಲ್ಲಿ ವೈಟ್‌ಬರ‍್ಡ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದು, ಕಳೆದ ಐದು ತಿಂಗಳಿನಿಂದ ಲಿವ್‌-ಇನ್‌ ಸಂಬಂಧದಲ್ಲಿದ್ದರು ಎನ್ನಲಾಗಿದೆ. ಈ ವಿಚಾರ ಸೂರ್ಯನ ಪೋಷಕರಿಗೂ ತಿಳಿದಿತ್ತು. ಆರಂಭದಲ್ಲಿ ಮದುವೆಗೆ ಒಪ್ಪಿಗೆ ಸೂಚಿಸಿದ್ದ ಸೂರ್ಯನ ಪೋಷಕರು ಬಳಿಕ ನಿಲುವು ಬದಲಿಸಿದ್ದಾರೆ ಎಂದು ನಿಷ್ಮಾ ಆರೋಪಿಸಿದ್ದಾರೆ. ಮತ್ತೊಂದೆಡೆ, ನಿಷ್ಮಾ ಅವರ ತಾಯಿ ಮದುವೆಗೆ ವಿರೋಧ ವ್ಯಕ್ತಪಡಿಸಿದ್ದರು ಎನ್ನಲಾಗಿದೆ.

ಸೆಪ್ಟೆಂಬರ್ 24ರಂದು ಸರ‍್ಯ ತನ್ನ ಮೊಬೈಲ್ ಫೋನ್ ಬಿಟ್ಟು ನಾಪತ್ತೆಯಾಗಿದ್ದಾನೆ. ಸೂರ್ಯನ ಸ್ನೇಹಿತ ಪ್ರವೀಣ್ ತನ್ನ ವಿರುದ್ಧ ಸೂರ್ಯನ ಪೋಷಕರಿಗೆ ಸುಳ್ಳು ಮಾಹಿತಿ ನೀಡಿದ್ದಾರೆ ಎಂಬುದು ನಿಷ್ಮಾ ಅವರ ಆರೋಪವಾಗಿದೆ.

ಸೂರ್ಯ ಮದುವೆಯಾಗುವುದಾಗಿ ನಂಬಿಸಿ ಮೋಸ ಮಾಡಿದ್ದಾನೆ ಎಂದು ಆರೋಪಿಸಿರುವ ನಿಷ್ಮಾ, ಕಳೆದ 15 ದಿನಗಳಿಂದ ಊಟ, ನಿದ್ದೆ ಇಲ್ಲದೆ ಮಾನಸಿಕವಾಗಿ ನೊಂದಿದ್ದೇನೆ ಎಂದು ಕಣ್ಣೀರಿಟ್ಟಿದ್ದಾರೆ. ಈ ನಡುವೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಯುವತಿ, ಗುರುವಾರದವರೆಗೆ ಕಾಯುತ್ತೇನೆ. ಅಷ್ಟರೊಳಗೆ ಸೂರ್ಯ ಬಾರದಿದ್ದರೆ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ವಿಡಿಯೊದಲ್ಲಿ ಹೇಳಿಕೊಂಡಿದ್ದಾರೆ ಎನ್ನಲಾಗಿದೆ.

ತನ್ನ ಸಾವಿಗೆ ಸೂರ್ಯ, ಆತನ ಪೋಷಕರು ಹಾಗೂ ಪ್ರವೀಣ್ ಕಾರಣರಾಗುತ್ತಾರೆ ಎಂದು ವಿಡಿಯೊದಲ್ಲಿ ಆರೋಪಿಸಿರುವ ನಿಷ್ಮಾ, ಈ ಸಂಬಂಧ ಬೆಂಗಳೂರಿನ ಮಹಾಲಕ್ಷ್ಮಿ ಲೇಔಟ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

Must Read