October 18, 2026
Sunday, October 18, 2026
spot_img

ಅಪ್ರಾಪ್ತ ಬಾಲಕನ ಮೇಲಿನ ಲೈಂಗಿಕ ದೌರ್ಜ*ನ್ಯ ಆರೋಪ: ಚರ್ಚ್ ಪಾದ್ರಿಯ ಬಂಧನ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಅಪ್ರಾಪ್ತ ಬಾಲಕನ ಮೇಲೆ ದೀರ್ಘಕಾಲದಿಂದ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಹಿನ್ನೆಲೆಯಲ್ಲಿ ಮಂಗಳೂರು ದಕ್ಷಿಣ ಠಾಣೆ ಪೊಲೀಸರು ಚರ್ಚ್ ಪಾದ್ರಿ ಸೈಪ್ರಿಯನ್ ಪಿಂಟೋ ಅವರನ್ನು ಬಂಧಿಸಿದ್ದಾರೆ.

ಪ್ರಕರಣ ದಾಖಲಾಗುತ್ತಿದ್ದಂತೆ ನಾಪತ್ತೆಯಾಗಿದ್ದ ಆರೋಪಿಯನ್ನು ಸಂಬಂಧಿಕರ ಮನೆಯೊಂದರಿಂದ ವಶಕ್ಕೆ ಪಡೆಯಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ.

ಪ್ರಾರ್ಥನೆಗೆ ಬರುತ್ತಿದ್ದ ಬಾಲಕನಿಗೆ ಕಿರುಕುಳದ ಆರೋಪ

ಬಾಲಕನು ವೇಲೆನ್ಸಿಯಾದ ಸೇಂಟ್ ವಿನ್ಸೆಂಟ್ ಫೆರರ್ ಚರ್ಚ್‌ಗೆ ನಿಯಮಿತವಾಗಿ ಪ್ರಾರ್ಥನೆಗಾಗಿ ಭೇಟಿ ನೀಡುತ್ತಿದ್ದ. ಈ ಪರಿಚಯದ ಹಿನ್ನೆಲೆಯಲ್ಲಿ ಧರ್ಮಗುರು ಬಾಲಕನನ್ನು ಖಾಸಗಿ ಕೊಠಡಿ ಹಾಗೂ ತಮ್ಮ ವಸತಿ ಕೊಠಡಿಗೆ ಕರೆಸಿಕೊಂಡು ಹಲವು ಬಾರಿ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಮತ್ತು ಅನುಚಿತವಾಗಿ ವರ್ತಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಇದನ್ನೂ ಓದಿ:

ಬಾಲಕ ಈ ವಿಚಾರವನ್ನು ತನ್ನ ಸ್ನೇಹಿತರೊಂದಿಗೆ ಹಂಚಿಕೊಂಡಾಗ, ಇತರ ಕೆಲವು ಬಾಲಕರೂ ಇದೇ ರೀತಿಯ ಕಿರುಕುಳಕ್ಕೆ ಒಳಗಾಗಿದ್ದರೆಂಬ ಮಾಹಿತಿ ಬಹಿರಂಗವಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಪ್ರಕರಣದ ಎಲ್ಲ ಅಂಶಗಳನ್ನು ಪೊಲೀಸರು ಪರಿಶೀಲಿಸುತ್ತಿದ್ದಾರೆ.

ಪ್ರಕರಣ ದಾಖಲಾಗುತ್ತಿದ್ದಂತೆ ನಾಪತ್ತೆ

ಅಪ್ರಾಪ್ತ ಬಾಲಕನ ಮೇಲಿನ ಲೈಂಗಿಕ ದೌರ್ಜನ್ಯದ ಆರೋಪದ ಕುರಿತು ಪೋಕ್ಸೊ ಕಾಯ್ದೆಯ ಸೆಕ್ಷನ್ 8 ಮತ್ತು 10 ಹಾಗೂ ಭಾರತೀಯ ನ್ಯಾಯ ಸಂಹಿತೆ (BNS), 2023ರ ಸೆಕ್ಷನ್ 75(2) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಪ್ರಕರಣ ದಾಖಲಾಗುತ್ತಿದ್ದಂತೆಯೇ ಆರೋಪಿ ನಾಪತ್ತೆಯಾಗಿದ್ದರು ಎನ್ನಲಾಗಿದೆ. ಬಳಿಕ ಪೊಲೀಸರು ಕಾರ್ಯಾಚರಣೆ ನಡೆಸಿ ಅವರನ್ನು ಬಂಧಿಸಿದ್ದಾರೆ.

ವಿಚಾರಣೆ ಮತ್ತು ಅಗತ್ಯ ಕಾನೂನು ಪ್ರಕ್ರಿಯೆಗಳನ್ನು ಪೂರ್ಣಗೊಳಿಸಿದ ನಂತರ ಆರೋಪಿಯನ್ನು ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಲಾಗುವುದು ಎಂದು ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.

Must Read