ಹೊಸದಿಗಂತ ಡಿಜಿಟಲ್ ಡೆಸ್ಕ್:
ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಕೇಳಿ ಬಂದಿರುವ ಲೈಂಗಿಕ ದೌರ್ಜನ್ಯಕ್ಕೆ ಆರೋಪಕ್ಕೆ ಸಂಬಂಧಿಸಿದಂತೆ ಸಂತ್ರಸ್ತೆಯರು ದೂರು ನೀಡಲು ವಿಶೇಷ ತನಿಖಾ ತಂಡ ತೆರೆದಿದೆ.
ಇದುವರೆಗೂ ಸಹಾಯವಾಣಿಗೆ 30 ಕ್ಕೂ ಹೆಚ್ಚು ಕರೆಗಳು ಬಂದಿರುವ ಬಗ್ಗೆ ಎಸ್ಐಟಿ ತಿಳಿಸಿದೆ. ಅಶ್ಲೀಲ ವಿಡಿಯೋಗಳ ಪೆನ್ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ದೌರ್ಜನ್ಯಕ್ಕೆ ಒಳಗಾಗಿರುವ ಸಂತ್ರಸ್ತೆಯರು ಪೊಲೀಸ್ ಠಾಣೆಗೆ ತೆರಳಿ ದೂರು ನೀಡಲು ಹಿಂಜರಿಯುತ್ತಾರೆ ಎಂಬ ಉದ್ದೇಶದಿಂದ ಎಸ್ಐಟಿಗೆ ದೂರು ನೀಡಲು ಸಹಾಯವಾಣಿ ತೆರೆಯಲಾಗಿತ್ತು. ಅಂದಿನಿಂದ ಇಲ್ಲಿಯ ವರೆಗೆ ಒಟ್ಟು 30 ಕ್ಕೂ ಹೆಚ್ಚು ಕರೆಗಳು ಬಂದಿವೆ. ಯಾರ ವೈಯಕ್ತಿಕ ಮಾಹಿತಿಯನ್ನೂ ಬಹಿರಂಗಪಡಿಸಲಾಗಿಲ್ಲ.