ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯದ ಆರೋಪ: ಪೊಲೀಸರಿಂದ ವರದಿ ಕೇಳಿದ ರಾಷ್ಟ್ರೀಯ ಮಹಿಳಾ ಆಯೋಗ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 
 
ಹಾಸನ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ದಾಖಲಾಗಿರುವ ಲೈಂಗಿಕ ದೌರ್ಜನ್ಯದ ಆರೋಪದ ಕುರಿತು ರಾಷ್ಟ್ರೀಯ ಮಹಿಳಾ ಆಯೋಗವು (ಎನ್‌ಸಿಡಬ್ಲ್ಯು) ಮೂರು ದಿನಗಳಲ್ಲಿ ವರದಿ ಸಲ್ಲಿಸುವಂತೆ ಕರ್ನಾಟಕ ಪೊಲೀಸರಿಗೆ ಸೂಚಿಸಿದೆ.

ಹಲವು ಮಹಿಳೆಯರ ಮೇಲೆ ಪ್ರಜ್ವಲ್ ನಡೆಸಿದ್ದಾರೆ ಎನ್ನಲಾದ ಲೈಂಗಿಕ ದೌರ್ಜನ್ಯ ಪ್ರಕರಣ ಬಹಿರಂಗಗೊಂಡ ಬೆನ್ನಲ್ಲೇ ಸರಣಿಯೋಪಾದಿಯಲ್ಲಿ ವಿಡಿಯೊ ತುಣುಕುಗಳು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿವೆ.ರೇವಣ್ಣ ಮತ್ತು ಪ್ರಜ್ವಲ್‌ ವಿರುದ್ಧ ಹೊಳೆನರಸೀಪುರ ನಗರ ಠಾಣೆಯಲ್ಲಿ ಕ್ರಿಮಿನಲ್‌ ಪ್ರಕರಣವೂ ದಾಖಲಾಗಿದೆ

ಈ ಎಲ್ಲ ಬೆಳವಣಿಗೆಗಳ ಕುರಿತು ವರದಿ ಸಲ್ಲಿಸುವಂತೆ ಕರ್ನಾಟಕ ಡಿಜಿಪಿಗೆ ಬರೆದ ಪತ್ರದಲ್ಲಿ ಎನ್‌ಸಿಡಬ್ಲ್ಯೂ ಉಲ್ಲೇಖಿಸಿದೆ.

ಇಂತಹ ಘಟನೆಗಳು ಮಹಿಳೆಯರ ಸುರಕ್ಷತೆಗೆ ಅಪಾಯವನ್ನುಂಟು ಮಾಡುವುದು ಮಾತ್ರವಲ್ಲದೆ, ಮಹಿಳೆಯರ ವಿರುದ್ಧ ಅಗೌರವ ಮತ್ತು ಹಿಂಸೆಯ ಸಂಸ್ಕೃತಿಯನ್ನು ಪ್ರಚೋದಿಸುತ್ತದೆ. ಹಾಗಾಗಿ ದೇಶದಿಂದ ಪರಾರಿಯಾಗಿರುವ ಆರೋಪಿಯನ್ನು ಶೀಘ್ರವೇ ಬಂಧಿಸಿ ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದು ಮಹಿಳಾ ಆಯೋಗವು ಒತ್ತಾಯಿಸಿದೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!