ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಾಲಿವುಡ್ನ ಖ್ಯಾತ ನಟ ಶರದ್ ಕಪೂರ್ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲಾಗಿದೆ. 32 ವರ್ಷದ ಬಾಲಿವುಡ್ ನಟಿಯೊಬ್ಬರು ಶರದ್ ಕಪೂರ್ ವಿರುದ್ಧ ದೂರು ದಾಖಲಿಸಿದ್ದಾರೆ.
ನವೆಂಬರ್ 27 ರಂದು ಶರದ್ ಕಪೂರ್, ದೂರು ನೀಡಿರುವ ಮಹಿಳೆಯ ವಿರುದ್ಧ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ.
ಪಶ್ಚಿಮ ಉಪನಗರದಲ್ಲಿರುವ ತನ್ನ ಮನೆಯಲ್ಲಿ ಮಹಿಳೆಯೊಂದಿಗೆ ಅನುಚಿತವಾಗಿ ವರ್ತಿಸಿದ ಮತ್ತು ಅನುಚಿತವಾಗಿ ಸ್ಪರ್ಶಿಸಿದ ಆರೋಪದ ಮೇಲೆ ಬಾಲಿವುಡ್ ನಟ ಶರದ್ ಕಪೂರ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.
32 ವರ್ಷದ ಮಹಿಳೆ ತನ್ನ ದೂರಿನಲ್ಲಿ, ಶರದ್ ಕಪೂರ್ ಅವರು ಸಿನಿಮಾ ಚಿತ್ರೀಕರಣದ ಬಗ್ಗೆ ಚರ್ಚಿಸುವ ನೆಪದಲ್ಲಿ ನನ್ನನ್ನು ತನ್ನ ಮನೆಗೆ ಕರೆಸಿಕೊಂಡಿದ್ದರು. ಅದರಂತೆ ನಾನು ಅವರ ಮನೆಗೆ ಹೋಗಿದ್ದಾಗ ತನ್ನ ಮಲಗುವ ಕೋಣೆಗೆ ಕರೆದುಕೊಂಡು ಹೋಗಿ ಅನುಚಿತವಾಗಿ ವರ್ತಿಸಿದನು ಮತ್ತು ಬಲವಂತವಾಗಿ ತನ್ನನ್ನು ಮುಟ್ಟಿದರು ಆರೋಪಿಸಿರುವುದಾಗಿ ಅಧಿಕಾರಿ ತಿಳಿಸಿದ್ದಾರೆ.
ನಂತರ ನಟ ಈ ಮಹಿಳೆಗೆ ವಾಟ್ಸಾಪ್‌ನಲ್ಲಿ ಅಸಭ್ಯ ಭಾಷೆ ಬಳಸಿ ಸಂದೇಶ ಕಳುಹಿಸಿದ್ದಾರೆ ಎಂದು ಅವರು ಹೇಳಿದ್ದಾರೆ.
ತಾನು ಫೇಸ್‌ಬುಕ್ ಮೂಲಕ ನಟನೊಂದಿಗೆ ಸಂಪರ್ಕಕ್ಕೆ ಬಂದಿದ್ದು, ನಂತರ ವಿಡಿಯೋ ಕರೆಗಳ ಮೂಲಕ ಅವರೊಂದಿಗೆ ಸಂವಹನ ನಡೆಸಿದ್ದೇನೆ ಎಂದು ಮಹಿಳೆ ಹೇಳಿಕೊಂಡಿದ್ದಾಳೆ ಎಂದು ಅಧಿಕಾರಿ ತಿಳಿಸಿದ್ದಾರೆ.
ದೂರಿನ ಆಧಾರದ ಮೇಲೆ, ಪೊಲೀಸರು ಕಪೂರ್ ವಿರುದ್ಧ ಕಪೂರ್ ವಿರುದ್ಧ ಎಫ್‌ಐಆರ್ ದಾಖಲಿಸಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಅವರು ಹೇಳಿದ್ದಾರೆ.