ಲೈಂಗಿಕ ದೌರ್ಜನ್ಯ ಆರೋಪ: ಕೇರಳದ ಮಾಜಿ ಶಾಸಕ ಪಿಸಿ ಜಾರ್ಜ್​ ಅರೆಸ್ಟ್

ಹೊಸದಿಗಂತ ಡಿಜಿಟಲ್‌ ಡೆಸ್ಕ್‌

ಲೈಂಗಿಕ ದೌರ್ಜನ್ಯ ಆರೋಪದ ಮೇಲೆ ಕೇರಳದ ಮಾಜಿ ಶಾಸಕ ಪಿಸಿ ಜಾರ್ಜ್​ ಅವರನ್ನು ಶನಿವಾರ ಪೊಲೀಸರು ಬಂಧಿಸಿದ್ದಾರೆ.
ಕಳೆದ ಫೆಬ್ರವರಿಯಲ್ಲಿ ಮಹಿಳೆಯೊಬ್ಬಳನ್ನು ತನ್ನ ಗೆಸ್ಟ್​ಹೌಸ್​ಗೆ ಕರೆಸಿಕೊಂಡಿದ್ದ ಮಾಜಿ ಶಾಸಕ ಲೈಂಗಿಕ ಕಿರುಕುಳ ನೀಡಿದ್ದಲ್ಲದೇ ನಿರಂತರ ಸಂದೇಶ ರವಾನಿಸಿ ಕಿರುಕುಳ ನೀಡುತ್ತಿದ್ದಾರೆ ಎಂದು ಸಂತ್ರಸ್ತ ದೂರು ನೀಡಿದ್ದಾರೆ.
ಸದ್ಯ ಪೊಲೀಸರ ವಶದಲ್ಲಿರುವ ಮಾಜಿ ಶಾಸಕನನ್ನು ತೀವ್ರ ವಿಚಾರಣೆಗೊಳಪಡಿಸಲಾಗುತ್ತಿದೆ. ಇದರ ಜೊತೆಗೆ ಚಿನ್ನ ಕಳ್ಳ ಸಾಗಾಣಿಕೆ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ಸ್ವಪ್ನಾ ಸುರೇಶ್​ ಜತೆಗಿನ ಸಂಪರ್ಕ ಹೊಂದಿರುವ ಕುರಿತು ವಿಚಾರಣೆ ನಡೆಸಲಾಗುತ್ತಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!