ಹೊಸದಿಗಂತ ಡಿಜಿಟಲ್ ಡೆಸ್ಕ್:
ಹೆಚ್.ಡಿ.ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಮೀನು ಅರ್ಜಿ ವಿಚಾರಣೆ ಆರಂಭವಾಗಿದ್ದು, ಜಾಮೀನು ನೀಡಲು ಎಸ್ ಐಟಿ ಆಕ್ಷೇಪ ವ್ಯಕ್ತಪಡಿಸಿದೆ.
ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯದಲ್ಲಿ ಹೆಚ್.ಡಿ.ರೇವಣ್ಣ ಜಾಮೀನು ಅರ್ಜಿ ವಿಚಾರಣೆ ಆರಂಭವಾಗಿದೆ.
ಇದೇ ಪ್ರಕರಣದಲ್ಲಿ ರೇವಣ್ಣ ವಿರುದ್ಧ ಸೆಕ್ಷನ್ 376 ಅಡಿ ಎಫ್ ಐ ಆರ್ ದಾಖಲಾಗಿದೆ. ಜಾಮೀನುರಹಿತ ಪ್ರಕರಣ ಕೂಡ ಇದೆ. ಹಾಗಾಗಿ ಜಾಮೀನಿಗೆ ನಮ್ಮ ಆಕ್ಷೇಪಣೆ ಇದೆ ಎಂದು ಎಸ್ ಪಿಪಿ ವಾದ ಮಂಡಿಸಿದ್ದಾರೆ.
ಮಾಜಿ ಸಚಿವ ಹೆಚ್.ಡಿ.ರೇವಣ್ಣ ಕೋರ್ಟ್ ಗೆ ಹಾಜರಾಗಿದ್ದಾರೆ.