Wednesday, September 27, 2023

Latest Posts

ಉಪನ್ಯಾಸಕಿ ಮೇಲೆ ಲೈಂಗಿಕ ಕುರುಕುಳ ಆರೋಪ: ಎಎಸ್ ಎಂ ಕಾಲೇಜು ಪ್ರಾಚಾರ್ಯ ಶರಣಪ್ಪ ಅಮಾನತು

ಹೊಸದಿಗಂತ ವರದಿ,ಬಳ್ಳಾರಿ:

ಎಎಸ್ ಎಂ ಮಹಿಳಾ ವಿದ್ಯಾಲಯದ ಉಪನ್ಯಾಸಕಿ ಮೇಲೆ ಲೈಂಗಿಕ ಕುರುಕುಳ, ದೌರ್ಜನ್ಯ, ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವೀ.ವಿ.ಸಂಘದ ಆಡಳಿತ ಮಂಡಳಿ ಪ್ರಾಚಾರ್ಯ ಶರಣಪ್ಪ ಅವರನ್ನು ಸೇವೆಯಿಂದ ಅಮಾನತ್ತುಗೊಳಿಸಿ ಆದೇಶ ಹೊರಡಿಸಿದೆ.

ಮಹಿಳಾ ವಿದ್ಯಾಲಯದ ಉಪನ್ಯಾಸಕಿ ಮೇಲೆ ಲೈಂಗಿಕ ಕಿರುಕುಳ, ದೌರ್ಜನ್ಯ, ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನೊಂದ ಕಾಲೇಜು ಉಪನ್ಯಾಸಕಿ ನಗರದ ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿ, ಕ್ರಮಕ್ಕೆ ಒತ್ತಾಯಿಸಿದ್ದರು.

ಈ ಕುರಿತು ವೀರಶೈವ ವಿದ್ಯಾವರ್ಧಕ ಸಂಘದ ಕಚೇರಿಯಲ್ಲಿ ಅಧ್ಯಕ್ಷ ಆರ್.ರಾಮನಗೌಡ ಅವರ ಅಧ್ಯಕ್ಷತೆಯಲ್ಲಿ ತುರ್ತು ಕಾರ್ಯಕಾರಿ ಸಭೆಯನ್ನು ಹಮ್ಮಿಕೊಳ್ಳಲಾಗಿತ್ತು. ಎಎಸ್ ಎಂ ಮಹಿಳಾ ಕಾಲೇಜು ಪ್ರಾಚಾರ್ಯ ಶರಣಪ್ಪ ಅವರು, ಕಾಲೇಜಿನ ಉಪನ್ಯಾಸಕಿಯೋಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಠಾಣೆಯಲ್ಲಿ ದೂರು ದಾಖಲಾಗಿದೆ.

ಸಂಘದ ಕಚೇರಿಗೆ ಸಂತ್ರಸ್ಥೆ ಮಹಿಳೆ ನೀಡಿದ ದೂರು ಆಧರಿಸಿ, ಪ್ರಾಚಾರ್ಯ ಶರಣಪ್ಪ ಅವರು, ಶ್ರೀಮತಿ ಅಲ್ಲಂ ಸುಮಂಗಳಮ್ಮ ಕಾಲೇಜು, ವೀರಶೈವ ವಿದ್ಯಾವರ್ಧಕ ಸಂಘಕ್ಕೆ ಕೆಟ್ಟ ಹೆಸರು ತಂದಿರುವುದನ್ನು ಖಂಡಿಸಿ ಅವರ ಮೇಲಿದ್ದ ವಿವಿಧ ಆಪಾದನೆಗಳನ್ನು ಕಾಯ್ದಿರಿಸಿ ಪ್ರಾಚಾರ್ಯ ಶರಣಪ್ಪ ಅವರನ್ನು ಸೇವೆಯಿಂದ ಅಮಾನತ್ತು ಮಾಡಲಾಗಿದೆ ಎಂದು ವೀರಶೈವ ವಿದ್ಯಾವರ್ಧಕ ಸಂಘದ ಸಹ ಕಾರ್ಯದರ್ಶಿ ದರೂರು ಶಾಂತನಗೌಡ ಅವರು ತಿಳಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!