ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಆರೋಪ: ಮುಖ್ಯ ಶಿಕ್ಷಕನ ವಿರುದ್ಧ ಪೋಕ್ಸೋ ಪ್ರಕರಣ ದಾಖಲು

ಹೊಸದಿಗಂತ ವರದಿ, ಮಡಿಕೇರಿ:

ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಪ್ರೌಢಶಾಲಾ ಮುಖ್ಯ ಶಿಕ್ಷಕನೊಬ್ಬನ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿದೆ.
ಮಡಿಕೇರಿ ತಾಲೂಕಿನ ನಾಪೋಕ್ಲು ಸಮೀಪದ ಚೆಯ್ಯಂಡಾಣೆಯ ಅನುದಾನಿತ ಶಾಲೆಯೊಂದರ ಮುಖ್ಯ ಶಿಕ್ಷಕ ಮನೋಹರ್ ವಿರುದ್ಧ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪ ಹೊರಿಸಲಾಗಿದೆ
ಪ್ರೌಢ ಶಾಲೆಯ ಇಬ್ಬರು ವಿದ್ಯಾರ್ಥಿನಿಯರಿಗೆ ಈತ ಲೈಂಗಿಕ ಕಿರುಕುಳ ನೀಡಿದ್ದಾನೆ ಎನ್ನಲಾಗಿದೆ. ಇವರಿಬ್ಬರೂ ಹತ್ತನೇ ತರಗತಿಯಲ್ಲಿ ಕಲಿಯುತ್ತಿದ್ದು, ಅವರನ್ನು ಮುಖ್ಯ ಶಿಕ್ಷಕರ ಕಚೇರಿಗೆ ಕರೆಸಿಕೊಂಡು ಅಸಭ್ಯ ವರ್ತನೆ ತೋರಿದ ಆರೋಪವಿದೆ.
ತಮಗೆ ಶಾಲೆಯಲ್ಲಿ ಲೈಂಗಿಕ ಕಿರುಕುಳ ನೀಡಲಾಗುತ್ತಿದೆ ಎಂದು ವಿದ್ಯಾರ್ಥಿಯರು ಪೋಷಕರಿಗೆ ತಿಳಿಸಿದ್ದರು. ಅವರು ಪೊಲೀಸ್‌ ಠಾಣೆಗೆ ದೂರು ನೀಡಿದ್ದು, ಇದೀಗ ಮಡಿಕೇರಿಯ ಮಹಿಳಾ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದೆ.
ಮಕ್ಕಳಿಗೆ ಪಾಠ ಮಾಡಬೇಕಾದ, ಬುದ್ಧಿ ಕಲಿಸಬೇಕಾದ ಮುಖ್ಯ ಶಿಕ್ಷಕನೇ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿರುವ ಪ್ರಕರಣ ಇದೀಗ ಜಿಲ್ಲೆಯಾದ್ಯಂತ ಚರ್ಚೆಗೆ ಗ್ರಾಸ ಒದಗಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!