ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ವಿರುದ್ಧ ಎಫ್‌ಐಆರ್ ದಾಖಲಾಗಿದೆ.
ಬಾಲಕಿಯ ತಾಯಿ ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಯಡಿಯೂರಪ್ಪ ವಿರುದ್ಧ ದೂರು ದಾಖಲಿಸಿದ್ದಾರೆ.
ಫೆಬ್ರವರಿ 2ರಂದು ಸಹಾಯ ಕೇಳಿಕೊಂಡು ಹೋಗಿದ್ದಾಗ ಬಿಎಸ್‌ವೈ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಸಂತ್ರಸ್ತೆಯು ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಿದ್ದಾಳೆ ಎಂದು ಹೇಳಲಾಗಿದೆ.