Saturday, December 9, 2023

Latest Posts

ತೆರಿಗೆ ವಂಚನೆ ಆರೋಪ: ಬೆಂಗಳೂರಿನ ಉದ್ಯಮಿಗಳ ನಿವಾಸ, ಕಚೇರಿ ಮೇಲೆ ಐಟಿ ರೇಡ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜಧಾನಿ ಬೆಂಗಳೂರಿನ ಉದ್ಯಮಿಗಳಿಗೆ ಬೆಳ್ಳಂಬೆಳಗ್ಗೆ ಐಟಿ ಶಾಕ್ ನೀಡಿದ್ದು, 10ಕ್ಕೂ ಹೆಚ್ಚು ಕಡೆ ಉದ್ಯಮಿಗಳ ಮನೆ, ಕಚೇರಿ ಮೇಲೆ ಆದಾಯ ತೆರಿಗೆ ಇಲಾಖೆ ದಾಳಿ ನಡೆಸಿದೆ.

ತೆರಿಗೆ ವಂಚನೆ ಆರೋಪದ ಹಿನ್ನೆಲೆಯಲ್ಲಿ ಐಟಿ ದಾಳಿ ನಡೆದಿದ್ದು, ಇನ್ನೂ ಪರಿಶೀಲನೆ ನಡೆಯುತ್ತಿದೆ. ಖಾಸಗಿ ಕಂಪನಿಗಳ ಮಾಲೀಕರು, ಚಿನ್ನದ ವ್ಯಾಪಾರಿಗಳ ಮನೆ ಮೇಲೆ ದಾಳಿ ನಡೆದಿದೆ. ೧೫ಕ್ಕೂ ಹೆಚ್ಚು ಐಟಿ ಅಧಿಕಾರಿಗಳ ತಂಡ ರಾತ್ರೋರಾತ್ರಿ ಚೆನ್ನೈ ಹಾಗೂ ದೆಹಲಿಯಿಂದ ಬೆಂಗಳೂರಿಗೆ ಬಂದಿಳಿದಿದ್ದು, ಬೆಳಗ್ಗೆಯೇ ಮನೆಗಳ ಮೇಲೆ ದಾಳಿ ನಡೆಸಿದ್ದಾರೆ.

ವಿಜಯನಗರ, ಬಿಟಿಎಂ ಲೇಔಟ್, ಹುಳಿಮಾವು, ಸದಾಶಿವನಗರದಲ್ಲಿ ರೇಡ್ ಮಾಡಲಾಗಿದೆ. ವಿಜಯನಗರದ ವೈದ್ಯೆ ಹಾಗೂ ಮೇಕ್ರಿ ಸರ್ಕಲ್‌ನಲ್ಲಿ ಇರುವ ಜ್ಯುವೆಲ್ಲರಿ ಶಾಪ್ ಮೇಲೂ ದಾಳಿ ಮಾಡಲಾಗಿದೆ.

ಕಳೆದ ವಾರವಷ್ಟೇ ಸುಳ್ಳು ಮಾಹಿತಿ, ಆದಾಯ ತೆರಿಗೆ ತಪ್ಪು ಮಾಹಿತಿ ನೀಡಿದ ಅಧಿಕಾರಿಗಳ ಮನೆ, ಕಚೇರಿ ಮೇಲೆ ಐಟಿ ದಾಳಿ ನಡೆದಿತ್ತು. ಇದೀಗ ಮತ್ತೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದು, ಯಾರೆಲ್ಲಾ ಮನೆಗಳ ಮೇಲೆ ದಾಳಿ ನಡೆದಿದೆ ಎನ್ನುವ ಮಾಹಿತಿ ಶೀಘ್ರದಲ್ಲೇ ಹೊರಬೀಳಲಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!