ಸ್ವಂತ ಕೆಲಸಕ್ಕೆ ಸರ್ಕಾರಿ ವಾಹನ ಬಳಕೆ ಆರೋಪ: ನಟಿ ತಾರಾ ವಿರುದ್ಧ ಎಫ್‌ಐಆರ್

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಸರ್ಕಾರಿ ವಾಹನವನ್ನು ಸ್ವಂತ ಕೆಲಸಕ್ಕಾಗಿ ಬಳಕೆ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಬಿಜೆಪಿಯ ನಾಯಕಿ, ನಟಿ ತಾರಾ (Tara) ಅವರ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

ಎಲೆಕ್ಷನ್ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿ ಸಿದ್ದರಾಯ ತಾವರೆಕೇಡ್ ಅವರ ದೂರಿನ ಅನ್ವಯ ಪ್ರಕರಣವನ್ನು ದಾಖಲಿಸ ಲಾಗಿದೆ(Karnataka Election 2023). ನಟಿ ತಾರಾ ಅವರು ಕ ಸರ್ಕಾರಿ ವಾಹನವನ್ನು ಬಳಕೆ ಮಾಡುತ್ತಿದ್ದರು. ಈ ಬಗ್ಗೆ ಕೆಆರ್‌ಎಸ್‌ ಪಕ್ಷದ ಕಾರ್ಯಕರ್ತರು ವಿಡಿಯೋ ಚಿತ್ರಿಕರಣ ಮಾಡಿ, ಫ್ಲೈಯಿಂಗ್ ಸ್ಕ್ವಾಡ್ ಗಮನಕ್ಕೆ ತಂದಿದ್ದರು. ಈ ದೂರು ಸ್ವೀಕರಿಸಿದ ಅಧಿಕಾರಿಗಳು, ಪರಿಶೀಲನೆ ನಡೆಸಿ ಪುಟ್ಟೇನಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.ಮೊದಲು ಎನ್‌ಸಿಆರ್ ದಾಖಲಿಸಿ ನಂತರ ನ್ಯಾಯಾಲಯದ ಅನುಮತಿ ಪಡೆದು ಎಫ್‌ಐಆರ್ ದಾಖಲು ಮಾಡಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!