ಕೆಜಿಎಫ್-2 ಚಿತ್ರದ ಹಾಡು ಬಳಕೆ ಆರೋಪ: ರಾಹುಲ್ ಗಾಂಧಿಗೆ ಬಿಗ್ ರಿಲೀಫ್ ಕೊಟ್ಟ ಹೈಕೋರ್ಟ್!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕೆಜಿಎಫ್-2 ಚಿತ್ರದ ಹಾಡನ್ನು ಅಕ್ರಮವಾಗಿ ಬಳಸಿಕೊಂಡ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಕರ್ನಾಟಕ ಹೈಕೋರ್ಟ್ ಬಿಗ್ ರಿಲೀಫ್ ನೀಡಿದೆ.
ಕೋರ್ಟ್ ರಾಹುಲ್ ಗಾಂಧಿ, ಜೈರಾಮ್ ರಮೇಶ್, ಸುಪ್ರಿಯಾ ವಿರುದ್ಧ ಕ್ರಿಮಿನಲ್ ಪ್ರಕರಣಕ್ಕೆ ಮಧ್ಯಂತರ ತಡೆ ನೀಡಿದೆ.

ನೀಡಿದ ದೂರಿನಲ್ಲಿ ಕ್ರಿಮಿನಲ್ ಪ್ರಕರಣದ ಯಾವುದೇ ಅಂಶಗಳಿಲ್ಲ. ಕಾಂಗ್ರೆಸ್ ನಾಯಕರಿಗೂ ಕಾಪಿರೈಟ್ ಉಲ್ಲಂಘನೆಗೂ ಸಂಬಂಧವಿಲ್ಲ ಎಂದು ರಾಹುಲ್ ಗಾಂಧಿ ಪರ ಹಿರಿಯ ವಕೀಲ ಎ.ಎಸ್.ಪೊನ್ನಣ್ಣ ವಾದ ಮಂಡಿಸಿದರು.

ಈ ವಾದ-ಪ್ರತಿವಾದ ಆಲಿಸಿದ ನ್ಯಾ.ಸುನೀಲ್ ದತ್ ಯಾದವ್, ಕ್ರಿಮಿನಲ್ ಪ್ರಕರಣಕ್ಕೆ ಮಧ್ಯಂತರ ತಡೆ ನೀಡಿ ಆದೇಶ ಹೊರಡಿಸಿದರು.

ಕೆಜಿಎಫ್-2 ಚಿತ್ರದ ಹಾಡನ್ನು ಅಕ್ರಮವಾಗಿ ಬಳಸಿಕೊಂಡು ಎಂಆರ್‌ಟಿ ಮ್ಯೂಸಿಕ್ ಕಂಪನಿಯ ಹಕ್ಕುಸ್ವಾಮ್ಯವನ್ನು ಉಲ್ಲಂಘಿಸಿದ ಆರೋಪದ ಮೇಲೆ ಕಾಂಗ್ರೆಸ್ ಪಕ್ಷಮತ್ತು ಭಾರತ್ ಜೋಡೋ ಯಾತ್ರೆಯ ಟ್ವಿಟರ್ ಖಾತೆಗಳನ್ನು ತಾತ್ಕಾಲಿಕವಾಗಿ ನಿರ್ಬಂಧಿಸುವಂತೆ ಬೆಂಗಳೂರಿನ ವಾಣಿಜ್ಯ ನ್ಯಾಯಾಲಯವು ಟ್ವಿಟರ್‌ಗೆ ನಿರ್ದೇಶನ ನೀಡಿತ್ತು. ಈ ನಿರ್ದೇಶನವನ್ನು ಕಾಂಗ್ರೆಸ್ ಹೈಕೋರ್ಟ್​ನಲ್ಲಿ ಪ್ರಶ್ನಿಸಿತ್ತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!