ಹುಲಿ ಉಗುರು ಧರಿಸಿದ ಆರೋಪ: ಇಬ್ಬರು ಅರ್ಚಕರಿಗೆ 14 ದಿನ ನ್ಯಾಯಾಂಗ ಬಂಧನ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಹುಲಿ ಉಗುರು ಧರಿಸಿದ್ದ ಇಬ್ಬರು ಅರ್ಚಕರಿಗೆ 14 ದಿನ ನ್ಯಾಯಾಂಗ ಬಂಧನ ವಿಧಿಸಿ ಚಿಕ್ಕಮಗಳೂರು ಜಿಲ್ಲಾ ಕೋರ್ಟ್ ಆದೇಶ ಹೊರಡಿಸಿದೆ.

ಚಿಕ್ಕಮಗಳೂರು ಜಿಲ್ಲೆಯ ಬಾಳೆಹೊನ್ನೂರಿನ ಖಾಂಡ್ಯದ ಮಾರ್ಕಂಡೇಶ್ವರ ದೇವಾಲಯದ ಇಬ್ಬರು ಅರ್ಚಕರನ್ನು ಬಂಧಿಸಲಾಗಿತ್ತು, ಇದೀಗ ಈ ಇಬ್ಬರು ಅರ್ಚಕರಿಗೆ 14 ದಿನ ನ್ಯಾಯಾಂಗ ಬಂಧನ ವಿಧಿಸಿ ಚಿಕ್ಕಮಗಳೂರಿನ ಜೆಎಂಎಫ್ ಸಿ ನ್ಯಾಯಾಲಯ ಆದೇಶ ಹೊರಡಿಸಿದೆ.
ಬಂಧಿತ ಅರ್ಚಕರನ್ನು ಕೃಷ್ಣಾನಂದ ಹೊಳ್ಳ, ನಾಗೇಂದ್ರ ಜೋಯಿಸ ಎಂದು ಗುರುತಿಸಲಾಗಿದೆ. ಬಂಧಿತರಿಂದ ಮೂರು ಹುಲಿ ಉಗುರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!