October 15, 2026
Thursday, October 15, 2026
spot_img

ಸಂಸದ ಸಸಿಕಾಂತ್ ಸೆಂಥಿಲ್ ವಿರುದ್ಧ ಆರೋಪ: ಜನಾರ್ದನ ರೆಡ್ಡಿಗೆ ಕೋರ್ಟ್ ಸಮನ್ಸ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮಾಜಿ ಸಚಿವ ಜನಾರ್ದನ ರೆಡ್ಡಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಪ್ರಕರಣದಲ್ಲಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸಮನ್ಸ್ ಜಾರಿಗೊಳಿಸಿದೆ. ಪ್ರಕರಣದ ಪ್ರಾಥಮಿಕ ವಿಚಾರಣೆ ನಡೆಸಿದ ನ್ಯಾಯಾಲಯ, ಆರೋಪಗಳನ್ನು ಪರಿಗಣಿಸಿ ಕ್ರಿಮಿನಲ್ ಪ್ರಕರಣ ದಾಖಲಿಸಿಕೊಂಡಿದೆ.

ಸೆಂಥಿಲ್ ದೂರು ಹಿನ್ನೆಲೆ

ತಮಿಳುನಾಡು ಸಂಸದ ಸಸಿಕಾಂತ್ ಸೆಂಥಿಲ್ ವಿರುದ್ಧ ಷಡ್ಯಂತ್ರದ ಆರೋಪ ಮಾಡಿದ್ದ ಹೇಳಿಕೆ ಮಾನಹಾನಿಗೆ ಕಾರಣವಾಗಿದೆ ಎಂದು ಆರೋಪಿಸಿ ಅವರು ನ್ಯಾಯಾಲಯದ ಮೆಟ್ಟಿಲೇರಿದ್ದರು. ದೂರಿನ ಪರಿಶೀಲನೆ ಬಳಿಕ ನ್ಯಾಯಾಲಯ ಪ್ರಕರಣವನ್ನು ವಿಚಾರಣೆಗೆ ಸ್ವೀಕರಿಸಿದೆ.

ಇದನ್ನೂ ಓದಿ:

ಆಗಸ್ಟ್ 24ರಂದು ಖುದ್ದು ಹಾಜರಿಗೆ ಸೂಚನೆ

ನ್ಯಾಯಮೂರ್ತಿ ಸಂದೀಪ್ ಪಾಟೀಲ್ ಅವರ ನ್ಯಾಯಪೀಠ ಜನಾರ್ದನ ರೆಡ್ಡಿಗೆ ಸಮನ್ಸ್ ಜಾರಿಗೊಳಿಸಿದ್ದು, ಆಗಸ್ಟ್ 24ರಂದು ಖುದ್ದು ನ್ಯಾಯಾಲಯಕ್ಕೆ ಹಾಜರಾಗುವಂತೆ ನಿರ್ದೇಶಿಸಿದೆ. ಈ ಬೆಳವಣಿಗೆ ರೆಡ್ಡಿಗೆ ಮತ್ತೊಂದು ಕಾನೂನು ಸವಾಲಾಗಿ ಪರಿಣಮಿಸಿದೆ.

Must Read