Monday, September 8, 2025

ಬಿಡದಿಯ ಕೇತಗಾನಹಳ್ಳಿ‌ ಬಳಿ ಸರ್ಕಾರಿ ಜಮೀನು ಒತ್ತುವರಿ ಆರೋಪ: HDKಗೆ ಬಿಗ್ ಶಾಕ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬಿಡದಿಯ ಕೇತಗಾನಹಳ್ಳಿ‌ ಬಳಿ ಸರ್ಕಾರಿ ಜಮೀನು ಒತ್ತುವರಿ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್.ಡಿ.ಕುಮಾರಸ್ವಾಮಿಗೆ ಹೈಕೋರ್ಟ್ ಶಾಕ್ ಕೊಟ್ಟಿದೆ.

ಎಸ್‌ಐಟಿ ರಚನೆಗೆ ಏಕಸದಸ್ಯ ಪೀಠ ತಡೆಯಾಜ್ಞೆ ನೀಡಿತ್ತು. ಈ ಆದೇಶಕ್ಕೆ ಸಿಜೆ ವಿಭು ಬಖ್ರು, ನ್ಯಾ.ಸಿ.ಎಂ.ಜೋಷಿ ಅವರಿದ್ದ ಪೀಠ ಮಧ್ಯಂತರ ತಡೆ ನೀಡಿದೆ. ನವೆಂಬರ್ 26 ರವರೆಗೆ ಏಕಸದಸ್ಯ ಪೀಠದ ಆದೇಶಕ್ಕೆ ಮಧ್ಯಂತರ ತಡೆ ನೀಡಿದೆ.

ಜಮೀನು ಒತ್ತುವರಿ ಆರೋಪ ಪ್ರಕರಣ ಸಂಬಂಧ ಎಸ್ಐಟಿ ರಚನೆಗೆ ಏಕಸದಸ್ಯ ಪೀಠ ತಡೆಯಾಜ್ಞೆ ನೀಡಿತ್ತು. ಪೀಠದ ಆದೇಶ ಪ್ರಶ್ನಿಸಿ ಹೈಕೋರ್ಟ್ ವಿಭಾಗೀಯ ಪೀಠಕ್ಕೆ ಸರ್ಕಾರ ಮೇಲ್ಮನವಿ ಸಲ್ಲಿಸಿತ್ತು. 6 ಎಕರೆ ಒತ್ತುವರಿ ತೆರವಿಗೆ ಸರ್ಕಾರ ಕ್ರಮ ಕೈಗೊಂಡಿದೆ. ದಾಖಲೆಗಳನ್ನು ಹಾಜರುಪಡಿಸುವಂತೆ ಎಸ್ಐಟಿ ನೋಟಿಸ್ ಜಾರಿಗೊಳಿಸಿದೆ.

ಇದನ್ನೂ ಓದಿ