October 15, 2026
Thursday, October 15, 2026
spot_img

ಅಪ್ರಾಪ್ತ ವಯಸ್ಕ ಬಾಲಕಿ ಮೇಲಿನ ಲೈಂಗಿಕ ದೌರ್ಜನ್ಯ ಆರೋಪ: ಭಟ್ಕಳದಲ್ಲಿ ಪಿಎಸ್‌ಐ ಅರೆಸ್ಟ್

ಹೊಸದಿಗಂತ ವರದಿ ಕಾರವಾರ:

ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ಜವಾಬ್ದಾರಿಯುತ ಪೊಲೀಸ್ ಅಧಿಕಾರಿಯೊಬ್ಬ ಅಪ್ರಾಪ್ತ ವಯಸ್ಕ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಬಂಧನಕ್ಕೊಳಗಾದ ಘಟನೆ ಜಿಲ್ಲೆಯ ಭಟ್ಕಳದಲ್ಲಿ ನಡೆದಿದೆ.

ಹೊನ್ನಾವರ ತಾಲೂಕಿನ ಮಂಕಿ ಪೊಲೀಫ್ ಠಾಣೆಯಲ್ಲಿ ಕಾನೂನು ಸುವ್ಯವಸ್ಥೆ ವಿಭಾಗದ ಪೊಲೀಸ್ ಉಪ ನಿರೀಕ್ಷಕ ಅಭಿನಂದನ್ ಗೌಡ ಬಂಧಿತ ಆರೋಪಿಯಾಗಿದ್ದು ಅಪ್ರಾಪ್ತ ಬಾಲಕಿ ನೀಡಿರುವ ದೂರಿನ ಹಿನ್ನೆಲೆಯಲ್ಲಿ ತಮ್ಮದೇ ಇಲಾಖೆಯ ಅಧಿಕಾರಿಯನ್ನು ಬಂಧಿಸಿರುವ ಭಟ್ಕಳ ನಗರ ಠಾಣೆಯ ಪೊಲೀಸರು ಪೋಕ್ಸೊ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಇದನ್ನೂ ಓದಿ:

ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನ ಅಭಿನಂದನ ಗೌಡ 2021 ಬ್ಯಾಚಿನ ಅಧಿಕಾರಿಯಾಗಿದ್ದು ಇತ್ತೀಚೆಗೆ ಮಂಕಿ ಪೊಲೀಸ್ ಠಾಣೆಯಲ್ಲಿ ಪಿ.ಎಸ್.ಐ ಆಗಿ ಅಧಿಕಾರ ವಹಿಸಿಕೊಂಡಿದ್ದರು.

ಯಲ್ಲಾಪುರ ಮೂಲದ ಅಪ್ರಾಪ್ತ ವಯಸ್ಸಿನ ಬಾಲಕಿಯೊಂದಿಗೆ ಸ್ನೇಹ ಬೆಳಸಿದ ಇವರು ಇತ್ತೀಚೆಗೆ ಭಟ್ಕಳದ ವಸತಿಗೃಹವೊಂದಕ್ಕೆ ಆಕೆಯನ್ನು ಕರೆದು ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿರುವ ಕುರಿತಂತೆ ದೂರು ದಾಖಲಾಗಿದೆ.

ಪ್ರಕರಣ ದಾಖಲಿಸಿದ ಭಟ್ಕಳ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Must Read