July 23, 2026
Thursday, July 23, 2026
spot_img

ಅವೈಜ್ಞಾನಿಕ ನಿರ್ಮಾಣದ ಆರೋಪ: 18 ಅಂತಸ್ತಿನ ಕಟ್ಟಡ ಕೆಡವಲು ಮುಂದಾದ ಜಿಬಿಎ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬೆಂಗಳೂರಿನ ಸುರಕ್ಷತೆ ದೃಷ್ಟಿಯಿಂದ ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ಮಹತ್ವದ ಕ್ರಮ ಕೈಗೊಂಡಿದ್ದು, ಅಪಾಯಕಾರಿ ಸ್ಥಿತಿಗೆ ತಲುಪಿರುವ 18 ಅಂತಸ್ತಿನ ಬಹುಮಹಡಿ ಕಟ್ಟಡವನ್ನು ತೆರವುಗೊಳಿಸಲು ಮುಂದಾಗಿದೆ.

ಎಸ್‌ಎನ್‌ಎನ್ ರಾಜ್ ಕಾರ್ಪ್ ಸಂಸ್ಥೆ ನಿರ್ಮಿಸಿರುವ ಈ ಕಟ್ಟಡದಲ್ಲಿ ಗಂಭೀರ ರಚನಾತ್ಮಕ ದೋಷಗಳು ಕಂಡುಬಂದಿದ್ದು, ಕಟ್ಟಡ ಒಂದು ಬದಿಗೆ ವಾಲಿದೆ. ಸುಮಾರು 200 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗಿದ್ದ ಈ ಅಪಾರ್ಟ್‌ಮೆಂಟ್‌ನಲ್ಲಿ 49 ಐಷಾರಾಮಿ ಫ್ಲ್ಯಾಟ್‌ಗಳಿವೆ.

ಸಾರ್ವಜನಿಕರ ಜೀವ ಸುರಕ್ಷತೆಯ ಹಿನ್ನೆಲೆಯಲ್ಲಿ ಜಿಬಿಎ ಮುಖ್ಯ ಆಯುಕ್ತರು ಕಟ್ಟಡ ನೆಲಸಮಗೊಳಿಸಲು ಸೂಚನೆ ನೀಡಿದ್ದಾರೆ. ತೆರವು ಕಾರ್ಯಾಚರಣೆಯ ಸಂಪೂರ್ಣ ವೆಚ್ಚವನ್ನು ತಾವೇ ಭರಿಸುವುದಾಗಿ ಎಸ್‌ಎನ್‌ಎನ್ ರಾಜ್ ಕಾರ್ಪ್ ಸಂಸ್ಥೆ ಒಪ್ಪಿಕೊಂಡಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !