Saturday, August 13, 2022

Latest Posts

ಕೆಲಸದ ಆಮಿಷವೊಡ್ಡಿ ವಂಚನೆ, ಅತ್ಯಾಚಾರ ಆರೋಪ: ನಟ ಅರೆಸ್ಟ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬ್ಯಾಂಕ್ ಕೆಲಸ ಕೊಡಿಸುವುದಾಗಿ ಹೇಳಿ ನಂಬಿಸಿ ಯುವತಿಯಿಂದ ಹಣ ಪಡೆದು, ನಂತರ ಅತ್ಯಾಚಾರವೆಸಗಿದ ಆರೋಪದಡಿ ಸ್ಯಾಂಡಲ್ ವುಡ್ ನಟ ಶೇಷಗಿರಿಯನ್ನು ಬೆಂಗಳೂರಿನ ಸುಬ್ರಹ್ಮಣ್ಯ ನಗರ ಠಾಣೆ ಪೊಲಿಸರು ಬಂಧಿಸಿದ್ದಾರೆ.
ನಟ ಶೇಷ್ ಅಲಿಯಾಸ್ ಶೇಷಗಿರಿ ಬಸವರಾಜ್ ವಿರುದ್ಧ ವಂಚನೆ, ಅತ್ಯಾಚಾರ, ಹಲ್ಲೆ ಆರೋಪ ಕೇಳಿಬಂದಿತ್ತು. ಹಲವು ದಿನಗಳಿಂದ ಆರೋಪಿ ಶೇಷಗಿರಿ ತಲೆಮರೆಸಿಕೊಂಡಿದ್ದು, ಇದೀಗ ಮೈಸೂರಿನಲ್ಲಿ ಬಂಧಿಸಲಾಗಿದೆ.
ಯುವತಿಗೆ ಬ್ಯಾಂಕ್ ನಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸಿದ್ದ ಆರೋಪಿ ಆಕೆಯಿಂದ ಹಣವನ್ನೂ ಪಡೆದು, ಅಸಭ್ಯವಾಗಿ ವರ್ತಿಸಿದ್ದ. ಯುವತಿ ನೀಡಿದ ದೂರಿನ ಹಿನ್ನೆಲೆಯಲ್ಲಿ ನಟ ಶೇಷಗಿರಿಯನ್ನು ಪೊಲೀಸರು ಬಂಧಿಸಿದ್ದಾರೆ.
ವಿಲನ್ ಪಾತ್ರಗಳಲ್ಲಿ ಕಾಣಿಸಿಕೊಳ್ಳುತ್ತಿದ್ದ ನಟ ಶೇಷಗಿರಿ ಡಾರ್ಕ್, ಸಸ್ಪೆನ್ಸ್, ಕಿಲಾಡಿಗಳು, ಆಷಿಕಿ-3 ಚಿತ್ರಗಳಲ್ಲಿ ಅಭಿನಯಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss