Saturday, April 1, 2023

Latest Posts

ಅದಾನಿ ಸಮೂಹದ ಕುರಿತ ಆರೋಪ ಆಧಾರ ರಹಿತ: ಅಮಿತ್ ಶಾ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ಅದಾನಿ ಸಮೂಹದ ಕುರಿತು ಹಿಂಡನ್ ಬರ್ಗ್ ನೀಡಿರುವ ವರದಿ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಮಹತ್ವದ ಹೇಳಿಕೆ ನೀಡಿದ್ದಾರೆ.

ಎಎನ್‌ಐ ಸುದ್ದಿ ಸಂಸ್ಥೆಗೆ ನೀಡಿರುವ ಸಂದರ್ಶನದಲ್ಲಿ ಮಾತನಾಡಿದ ಅವರು, ಅದಾನಿ ಕಂಪನಿ ಕುರಿತು ಆಧಾರ ರಹಿತ ಆರೋಪ ಮಾಡಲಾಗುತ್ತಿದೆ.ಕಾಂಗ್ರೆಸ್ ಬಳಿ ಇದಕ್ಕೆ ಸಾಕ್ಷ್ಯಾಧಾರ ಇದ್ದರೆ ನೀಡಲಿ ಎಂದು ಹೇಳಿದರು.

ಕಾಂಗ್ರೆಸ್ ನಾಯಕರ ಬಳಿ ನಿಜವಾಗಿಯೂ ದಾಖಲೆಗಳು ಇದ್ದರೆ ನ್ಯಾಯಾಲಯಕ್ಕೆ ಹೋಗುವ ಅವಕಾಶವಿದೆ. ಆದರೆ ಅವರುಗಳು ಆಧಾರ ರಹಿತ ಆರೋಪ ಮಾಡುತ್ತಿದ್ದಾರೆ ಎಂದು ಅಮಿತ್ ಶಾ ಆರೋಪಿಸಿದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!