ಹೊಸದಿಗಂತ ಡಿಜಿಟಲ್ ಡೆಸ್ಕ್:
ಶ್ರೀಲಂಕಾ ಜಲ ಗಡಿಯಲ್ಲಿ ಮೀನುಗಾರಿಕೆ ನಡೆಸಿದ ಆರೋಪದಡಿ 12 ಭಾರತೀಯ ಮೀನುಗಾರರನ್ನು ನೌಕಾಪಡೆ ಬಂಧಿಸಿದೆ ಎಂದು ಭಾನುವಾರ ಅಧಿಕೃತ ಹೇಳಿಕೆ ತಿಳಿಸಿದೆ.
ಶನಿವಾರ ಉತ್ತರ ಜಾಫ್ನಾ ಪರ್ಯಾಯ ದ್ವೀಪದ ಕರೈನಗರದ ಕರಾವಳಿಯಲ್ಲಿ ಮೀನುಗಾರರನ್ನು ಬಂಧಿಸಲಾಗಿದ್ದು, ಅವರ ಮೂರು ದೋಣಿಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ನೌಕಾಪಡೆ ಪ್ರಕಟಣೆಯಲ್ಲಿ ತಿಳಿಸಿದೆ.
2023ರಲ್ಲಿ ಶ್ರೀಲಂಕಾ ನೌಕಾಪಡೆ, 240 ಭಾರತೀಯ ಮೀನುಗಾರರನ್ನು ಬಂಧಿಸಿದ್ದು, ಅವರಿಂದ ಸುಮಾರು 35 ದೋಣಿಗಳನ್ನು ವಶಪಡಿಸಿಕೊಂಡಿತ್ತು.