ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯಸಭೆ ಚುನಾವಣೆ ಫಲಿತಾಂಶದ ನಂತರ ಸಂಭ್ರಮಾಚರಣೆ ವೇಳೆ ವಿಧಾನಸೌಧದ ಆವರಣದಲ್ಲಿ ಪಾಕ್ ಪರ ಘೋಷಣೆ ಕೂಗಲಾಗಿದೆ.
ಇದಕ್ಕೆ ಸಂಬಂಧಿಸಿದಂತೆ ತನಿಖೆಗಾಗಿ ಮೂರು ವಿಶೇಷ ತಂಡಗಳನ್ನು ರಚನೆ ಮಾಡಲಾಗಿದೆ ಎಂದು ಬೆಂಗಳೂರು ಕೇಂದ್ರ ವಿಭಾಗದ ಡಿಸಿಪಿ ಶೇಖರ್ ಮಾಹಿತಿ ನೀಡಿದ್ದಾರೆ.
ವಿಜೇತ ಅಭ್ಯರ್ಥಿ ನಾಸಿರ್ ಹುಸೇನ್ ಹಾಗೂ ಅವರ ಜೊತೆಯಲ್ಲಿ ಯಾರೆಲ್ಲಾ ಇದ್ದರು ಎಂದು ವಿಡಿಯೋ ಹಾಗೂ ಟೆಕ್ನಿಕಲ್ ಅನಾಲಿಸಿಸ್ ಪರಿಗಣಿಸಲಾಗುತ್ತದೆ. ಸುತ್ತಮುತ್ತ ಇದ್ದ ವ್ಯಕ್ತಿಗಳನ್ನು ಕರೆಸಿ ಇಂದು ವಿಚಾರಣೆ ನಡೆಸುವ ಸಾಧ್ಯತೆ ಇದೆ.