ಗಡುವು ಮೀರಿ ಪ್ರಚಾರ ಆರೋಪ: ಅಣ್ಣಾಮಲೈ ವಿರುದ್ಧ ಎಫ್‌ಐಆರ್‌

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಬಿಜೆಪಿ ಅಭ್ಯರ್ಥಿ ಹಾಗೂ ತಮಿಳುನಾಡು (Tamil Nadu) ಬಿಜೆಪಿ ರಾಜ್ಯಾಧ್ಯಕ್ಷ ಕೆ.ಅಣ್ಣಾಮಲೈ (K.Annamalai) ವಿರುದ್ಧ ಕೊಯಮತ್ತೂರು ಪೊಲೀಸರು ಎಫ್‌ಐಆರ್‌ ದಾಖಲಿಸಿದ್ದಾರೆ.

ಗಡುವನ್ನು ಮೀರಿ ರಾತ್ರಿ 10 ಗಂಟೆಯ ನಂತರವೂ ಪ್ರಚಾರ ನಡೆಸಿ ಸಾರ್ವಜನಿಕರಿಗೆ ತೊಂದರೆ ನೀಡಿದ ಆರೋಪದ ಮೇಲೆ ಅಣ್ಣಾಮಲೈ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಗಡುವು ಮೀರಿ ಬಿಜೆಪಿ ಪ್ರಚಾರ ನಡೆಸಿದ್ದಕ್ಕೆ ಡಿಎಂಕೆ ಮತ್ತು ಎಡಪಕ್ಷಗಳ ಕಾರ್ಯಕರ್ತರು ಆಕ್ಷೇಪ ವ್ಯಕ್ತಪಡಿಸಿದ್ದರು.

ಸೆಕ್ಷನ್ 143, 341 ಮತ್ತು 290 ರ ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ. ತಮ್ಮ ಪಕ್ಷದ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ಡಿಎಂಕೆ ನೀಡಿದ ದೂರಿನ ಮೇಲೆ ಬಿಜೆಪಿ ವಿರುದ್ಧ ಮತ್ತೊಂದು ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸ್‌ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ನಾನು ಯಾವುದೇ ನಿಯಮ ಉಲ್ಲಂಘಿಸಿಲ್ಲ. ರಾತ್ರಿ 10 ಗಂಟೆಯ ನಂತರ ಜನರನ್ನು ಭೇಟಿ ಮಾಡಲು ನನಗೆ ಎಲ್ಲ ಹಕ್ಕಿದೆ. ಯಾವ ಚುನಾವಣಾ ಆಯೋಗವು ನಿಮ್ಮನ್ನು ತಡೆಯುತ್ತದೆ? ಆದೇಶ ಎಲ್ಲಿದೆ, ನೀವು ನನಗೆ ತೋರಿಸುತ್ತೀರಾ ಎಂದು ಅಣ್ಣಾಮಲೈ ಕೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!