ಹೊಸದಿಗಂತ ಡಿಜಿಟಲ್ ಡೆಸ್ಕ್:
ಸಂಸದ ತೇಜಸ್ವಿ ಸೂರ್ಯ ವಿರುದ್ಧ ಹಲಸೂರು ಗೇಟ್ ಪೊಲೀಸ್ ಠಾಣೆ ಪ್ರಕರಣ ದಾಖಲಾಗಿದೆ.
ಬೆಂಗಳೂರಿನ ನಗರ್ತಪೇಟೆಯಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ವೇಳೆ ತೇಜಸ್ವಿ ಸೂರ್ಯ, ಮತೀಯ ಭಾವನೆ ಕೆರಳಿಸುವ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಚಿಕ್ಕಪೇಟೆ ನಿವಾಸಿಯೋರ್ವರು ನೀಡಿದ ದೂರಿನ ಹಿನ್ನಲೆಯಲ್ಲಿ ರಾಜ್ಯ ಚುನಾವಣಾ ಆಯೋಗದ ಸೂಚನೆ ಮೇರೆಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.