ಹೊಸದಿಗಂತ ಡಿಜಿಟಲ್ ಡೆಸ್ಕ್:
ಮತದಾರರಿಗೆ ಬೆದರಿಕೆ ಮತ್ತು ಆಮಿಷ ಒಡ್ಡಿದ ಆರೋಪದ ಮೇಲೆ ಬೆಂಗಳೂರಿನ ಆರ್‌ಎಂಸಿ ಯಾರ್ಡ್ ಠಾಣೆಯಲ್ಲಿ ತಮ್ಮ ವಿರುದ್ಧ ದಾಖಲಾಗಿರುವ ಎಫ್‌ಐಆರ್ ಪ್ರಶ್ನಿಸಿ ಡಿಸಿಎಂ ಡಿಕೆ ಶಿವಕುಮಾರ್ ಮಂಗಳವಾರ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.
ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ.ಸುರೇಶ್ ಪರ ರಾಜರಾಜೇಶ್ವರಿನಗರದ ಅಪಾರ್ಟ್‌ಮೆಂಟ್‌ನಲ್ಲಿ ಪ್ರಚಾರ ನಡೆಸಿದ ಡಿಕೆ ಶಿವಕುಮಾರ್ ಮತದಾರರಿಗೆ ಬೆದರಿಕೆ ಹಾಕುತ್ತಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ. ಅದಕ್ಕೆ ಸಂಬಂಧಿಸಿದ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಪ್ರಕಟಿಸಲಾಗಿದೆ. ನಂತರ ಈ ಬಗ್ಗೆ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದರು.
ಡಿ.ಕೆ. ಶಿವಕುಮಾರ್ ವಿರುದ್ಧ ಚುನಾವಣೆಯಲ್ಲಿ ಲಂಚ ಮತ್ತು ಅನಗತ್ಯ ಪ್ರಭಾವದ ಆರೋಪವಿದೆ.