ನೀತಿ ಸಂಹಿತೆ ಉಲ್ಲಂಘನೆ ಆರೋಪ: ಶೋಭಾ ಕರಂದ್ಲಾಜೆ ವಿರುದ್ಧ ಕ್ರಮಕ್ಕೆ ಚುನಾವಣಾ ಆಯೋಗ ನಿರ್ದೇಶನ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರಿಂದ ಮಾದರಿ ನೀತಿ ಸಂಹಿತೆ ಉಲ್ಲಂಘನೆಯಾಗಿದೆ ಎಂದು ಆರೋಪಿಸಿ ಡಿಎಂಕೆ ನೀಡಿರುವ ದೂರು ಆಧರಿಸಿ, ಸೂಕ್ತ ಕ್ರಮ ಕೈಗೊಳ್ಳುವಂತೆ ಕರ್ನಾಟಕ ಮುಖ್ಯ ಚುನಾವಣಾ ಅಧಿಕಾರಿಗೆ ಚುನಾವಣಾ ಆಯೋಗ ಬುಧವಾರ ನಿರ್ದೇಶನ ನೀಡಿದೆ.

48 ಗಂಟೆಗಳ ಒಳಗಾಗಿ ವರದಿ ಸಲ್ಲಿಸುವಂತೆಯೂ ಆಯೋಗ ಸೂಚಿಸಿದೆ.

‘ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಮಾರ್ಚ್‌ 1ರಂದು ಸಂಭವಿಸಿದ ಕಚ್ಚಾಬಾಂಬ್ ಸ್ಫೋಟಕ್ಕೆ ತಮಿಳುನಾಡು ಮೂಲದ ವ್ಯಕ್ತಿಯೇ ಹೊಣೆ ಎಂಬುದಾಗಿ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ’ ಎಂದು ಆರೋಪಿಸಿರುವ ಡಿಎಂಕೆ, ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿತ್ತು.

ಶೋಭಾ ಅವರ ಈ ಹೇಳಿಕೆ ಕುರಿತು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಹಾಗೂ ಡಿಎಂಕೆ ಇತರ ನಾಯಕರು ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!