ಹೊಸದಿಗಂತ ಡಿಜಿಟಲ್ ಡೆಸ್ಕ್:
ಮೈಸೂರು ಅಭಿವೃದ್ಧಿ ಪ್ರಾಧಿಕಾರದ ಹಗರಣ ಆಡಳಿತಾರೂಢ ಕಾಂಗ್ರೆಸ್ ಸರ್ಕಾರಕ್ಕೆ ತಲೆನೋವಾಗಿದೆ. ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ಸದಸ್ಯರು ಈ ಹಗರಣದಲ್ಲಿ ಭಾಗಿಯಾಗಿದ್ದಾರೆ ಎನ್ನಲಾಗಿದೆ.
ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಇಂದು ಬೆಂಗಳೂರು-ಮೈಸೂರಿಗೆ ಬಿಜೆಪಿ-ಜೆಡಿಎಸ್ ಜಂಟಿಯಾಗಿ ಪಾದಯಾತ್ರೆ ನಡೆಸಲು ಸಿದ್ಧತೆ ನಡೆಸಿವೆ.
ಮೈಸೂರು ಚಲೋ ಪಾದಯಾತ್ರೆಗು ಮುನ್ನ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಚಾಮುಂಡಿ ಬೆಟ್ಟದಲ್ಲಿ ಚಾಮುಂಡೇಶ್ವರಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿದರು. ಅವರಿಗೆ ಬಿಜೆಪಿ ಮುಖಂಡರು ಸಾಥ್ ನೀಡಿದರು.