Sunday, December 3, 2023

Latest Posts

ಜೆಡಿಎಸ್ ಜೊತೆ ಮೈತ್ರಿ: ವೈಯಕ್ತಿಕವಾಗಿ ನನ್ನ ವಿರೋಧವಿದೆ ಎಂದ ಎಸ್.ಟಿ ಸೋಮಶೇಖರ್

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಜೆಡಿಎಸ್ ಜೊತೆಗಿನ ಬಿಜೆಪಿ ಮೈತ್ರಿಗೆ ವೈಯಕ್ತಿಕವಾಗಿ ನನ್ನ ವಿರೋಧವಿದೆ ಎಂದು ಯಶವಂತಪುರ ಕ್ಷೇತ್ರದ ಬಿಜೆಪಿ ಶಾಸಕ ಎಸ್.ಟಿ.ಸೋಮಶೇಖರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಅವರು ವಿಧಾನಸೌಧದಲ್ಲಿ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿ, ಇಪ್ಪತ್ತು ವರ್ಷದಿಂದ ಜೆಡಿಎಸ್‍ನೊಂದಿಗೆ ಸೆಣಸಾಟ ಮಾಡಿಕೊಂಡು ಬಂದಿದ್ದೇವೆ. ಕಾಂಗ್ರೆಸ್-ಜೆಡಿಎಸ್ ಜೊತೆ ಮೈತ್ರಿ ನೋಡಿದ್ದೇನೆ. ಕಾಂಗ್ರೆಸ್‍ಗೆ ಜೆಡಿಎಸ್ ಮೊದಲಿನಿಂದಲೂ ವಿರೋಧ ಇದೆ. ಯಾವತ್ತೂ ನಮ್ಮ ಹಾಗೂ ಅವರ ಕಾರ್ಯಕರ್ತರಿಗೆ ಹೊಂದಾಣಿಕೆ ಇಲ್ಲ. ಮಾನಸಿಕ ಕಿರುಕುಳ ಹತ್ತಿರದಿಂದ ನೋಡಿದ್ದೇನೆ ಎಂದರು. ಜೆಡಿಎಸ್-ಬಿಜೆಪಿ ಮೈತ್ರಿ ಅಧಿಕೃತವಾದ ಬಳಿಕ ನಮ್ಮ ಮುಂದಿನ ನಡೆಯನ್ನೂ ತಿಳಿಸುತ್ತೇನೆ ಎಂದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!