ಅಭಿವೃದ್ಧಿ ಬಗ್ಗೆ ಚಿಂತಿಸದೆ ಕೇವಲ ಅಧಿಕಾರದ ಆಸೆಗಾಗಿ ‘ಮೈತ್ರಿ’ ಮಾಡಿಕೊಂಡಿದೆ: ಡಾ.ಎಂ.ಸಿ.ಸುಧಾಕರ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯದ ಅಭಿವೃದ್ಧಿಯ ಬಗ್ಗೆ ಚಿಂತಿಸದೆ ಕೇವಲ ಅಧಿಕಾರದ ಆಸೆಗಾಗಿ ಜೆಡಿಎಸ್ ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡಿದೆ ಎಂದು ಚಿಕ್ಕಬಳ್ಳಾಪುರ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಸಿ. ಸುಧಾಕರ್ ಹೇಳಿದ್ದಾರೆ.

ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಪರವಾಗಿ ಚುನಾವಣಾ ಪ್ರಚಾರದಲ್ಲಿ ಮಾತನಾಡಿದ ಅವರು, ಜೆಡಿಎಸ್ ಹೆಸರಿಗೆ ಮಾತ್ರ ಜಾತ್ಯತೀತ ಪಕ್ಷವಾಗಿದ್ದು, ಇಷ್ಟು ವರ್ಷ ಮತದಾರರನ್ನು ಮೂರ್ಖರನ್ನಾಗಿಸುವ ಕೆಲಸ ಸಾಕು ಮಾಡಬೇಕು. ಮತದಾರರು ಇನ್ನಷ್ಟು ಜಾಗರೂಕರಾಗಿರಿ ಎಂದು ಸಲಹೆ ನೀಡಿದರು.

ಜೆಡಿಎಸ್ ಮತ್ತು ಬಿಜೆಪಿಯನ್ನು ಅಧಿಕಾರದಿಂದ ದೂರವಿರಿಸಿ ಎಲ್ಲ ಜಾತಿ ಸಮುದಾಯಗಳ ಅಭಿವೃದ್ಧಿಗೆ ಶ್ರಮಿಸುತ್ತಿರುವ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿ ಗೌತಮ್ ಅವರನ್ನು ಲೋಕಸಭೆ ಚುನಾವಣೆಯಲ್ಲಿ ಗೆಲ್ಲಿಸಬೇಕು. ಕೇಂದ್ರದ ಬಿಜೆಪಿ ಸರಕಾರ ಕಳೆದ ದಶಕದಿಂದ ದೇಶದ ಜನತೆಗೆ ಕೇವಲ ಭರವಸೆಗಳನ್ನು ನೀಡುತ್ತಿದ್ದು, ಈಡೇರಿಸಿಲ್ಲ ಎಂದು ಆರೋಪಿಸಿದರು.

ಆದರೆ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಪಕ್ಷ ಮತ್ತು ಡಿ.ಕೆ. ಶಿವಕುಮಾರ್ ರಾಜ್ಯದಲ್ಲಿ ಚುನಾವಣೆಗೂ ಮುನ್ನ ಘೋಷಿಸಿದ್ದ ಐದು ಭರವಸೆಗಳನ್ನು ಅಧಿಕಾರಕ್ಕೆ ಬಂದ ತಕ್ಷಣ ಜಾರಿಗೊಳಿಸಿದ್ದಾರೆ. ಆದ್ದರಿಂದ ಕಾಂಗ್ರೆಸ್ ಬೆಂಬಲಿಸಿ ದೇಶ ಉಳಿಸುವ ಕೆಲಸ ಮಾಡಬೇಕು ಎಂದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!