ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………..
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………..
ಹೊಸ ದಿಗಂತ ಆನ್ ಲೈನ್ ಡೆಸ್ಕ್:
ಕೇಂದ್ರ ಸರ್ಕಾರ ವಿವಿಧ ರಾಜ್ಯಗಳಿಗೆ ಮೇ 17ರಿಂದ ಮೇ 23ರವರೆಗಿನ ಬಳಕೆಗಾಗಿ ರೆಮ್ಡೆಸಿವಿರ್ ಚುಚ್ಚುಮದ್ದಿನ 23 ಲಕ್ಷ ವಯಲ್ಸ್ ಹಂಚಿಕೆ ಮಾಡಿದೆ ಎಂದು ಕೇಂದ್ರ ಸಚಿವ ಡಿ.ವಿ. ಸದಾನಂದಗೌಡ ತಿಳಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ಮಾನ್ಯ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ನಮ್ಮ ಕೇಂದ್ರ ಸರ್ಕಾರವು ವಿವಿಧ ರಾಜ್ಯಗಳಿಗೆ ಮೇ 17ರಿಂದ ಮೇ 23ರವರೆಗಿನ ಬಳಕೆಗಾಗಿ 23 ಲಕ್ಷ ವಯಲ್ಸ್ ರೆಮ್ಡೆಸಿವಿರ್ ಚುಚ್ಚುಮದ್ದು ಹಂಚಿಕೆ ಮಾಡಿದ್ದು, ರಾಜ್ಯಕ್ಕೆ 4.25 ಲಕ್ಷ ವಯಲ್ಸ್ ಒದಗಿಸಲಾಗಿದೆ. ಏಪ್ರಿಲ್ 21ರಿಂದ ಇದುವರೆಗೆ 76 ಲಕ್ಷ ವಯಲ್ಸ್ ರೆಮ್ಡೆಸಿವಿರ್ ಹಂಚಲಾಗಿದ್ದು ರಾಜ್ಯದ ಪಾಲು 10 ಲಕ್ಷ ಎಂದು ತಿಳಿಸಿದ್ದಾರೆ.
ಸಕ್ರಿಯ ಪ್ರಕರಣಗಳ ಸಂಖ್ಯೆಯಯನ್ನು ಆಧರಿಸಿ ಇದನ್ನು ಹಂಚಿಕೆ ಮಾಡಲಾಗಿದ್ದು ಈ ಸಲ ಕರ್ನಾಟಕವು ಎಲ್ಲ ರಾಜ್ಯಗಳಿಗಿಂತ ಹೆಚ್ಚು ರೆಮ್ಡೆಸಿವಿರ್ ಪಡೆದಿದೆ.
https://twitter.com/DVSadanandGowda/status/1393808612422610950?s=20