ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೇರಳದ ತಿರುವನಂತಪುರಂ (Thiruvananthapuram) ಮೆಡಿಕಲ್ ಕಾಲೇಜಿನ ಏಳು ವೈದ್ಯಕೀಯ ವಿದ್ಯಾರ್ಥಿಗಳು ಪ್ರಾಂಶುಪಾಲರಿಗೆ ಪತ್ರಯೊಂದು ಬರೆದಿದ್ದು, ಅದ್ರಲ್ಲಿ ಆಪರೇಷನ್ ಥಿಯೇಟರ್‌ನಲ್ಲಿ ಹಿಜಾಬ್ ಧರಿಸಲು ಅವಕಾಶ ಮಾಡಿಕೊಡಬೇಕೆಂದು ಮನವಿ ಮಾಡಿದ್ದಾರೆ.
ಮುಸ್ಲಿಂ ಮಹಿಳೆಯರು ತಲೆ ಮುಚ್ಚಿಕೊಳ್ಳುವುದು ಕಡ್ಡಾಯ. ಆಸ್ಪತ್ರೆ ನಿಯಮಗಳ ಪ್ರಕಾರ ಆಪರೇಷನ್ ಥಿಯೇಟರ್‌ನಲ್ಲಿ ಸೂಚನೆಗಳನ್ನು ಅನುಸರಿಸಿ, ಹಿಜಾಬ್ ಧರಿಸಲು ಸಾಧ್ಯವಿಲ್ಲದ ಪರಿಸ್ಥಿತಿ ಇದೆ. ಹೀಗಾಗಿ ಉದ್ದನೆಯ ತೋಳಿನ ಸ್ಕ್ರಬ್ ಜಾಕೆಟ್ ಹಾಗೂ ಸರ್ಜಿಕಲ್ ಹುಡ್ ಧರಿಸಲು ಅವಕಾಶ ಮಾಡಿಕೊಡಬೇಕು ವಿದ್ಯಾರ್ಥಿನಿಯರು ಆಗ್ರಹಿಸಿದ್ದಾರೆ. 2020ನೇ ಬ್ಯಾಚ್‌ನ ಮೆಡಿಕಲ್ ವಿದ್ಯಾರ್ಥಿನಿ ಪತ್ರ ಬರೆದಿದ್ದು, ಇದಕ್ಕೆ 2018, 2021, 2022ನೇ ಬ್ಯಾಚ್‌ನ ಕೆಲ ಮುಸ್ಲಿಂ ವಿದ್ಯಾರ್ಥಿಗಳು ಸಹಿ ಹಾಕಿದ್ದಾರೆ.
ಆಪರೇಷನ್ ಥಿಯೇಟರ್ ಒಳಗೆ ತಲೆ ಮುಚ್ಚಿಕೊಳ್ಳಲು ಅವಕಾಶವಿಲ್ಲ. ಮುಸ್ಲಿಂ ಮಹಿಳೆಯರಿಗೆ ಅವರ ಧಾರ್ಮಿಕ ನಂಬಿಕೆಗಳ ಪ್ರಕಾರ ಎಲ್ಲಾ ಸಂದರ್ಭಗಳಲ್ಲಿ ಹಿಜಾಬ್ ಕಡ್ಡಾಯವಾಗಿದೆ ಎಂದು ಪತ್ರದಲ್ಲಿ ತಿಳಿಸಲಾಗಿದೆ. ಹಿಜಾಬ್ ಧರಿಸುವ ಮಹಿಳೆಯರು ಧಾರ್ಮಿಕವಾಗಿ ಉಡುಗೆ ಧರಿಸಬೇಕು. ಆಸ್ಪತ್ರೆ ಮತ್ತು ಶಸ್ತ್ರಚಿಕಿತ್ಸಾ ಕೊಠಡಿಯ ನಿಯಮಗಳನ್ನು ಅನುಸರಿಸಬೇಕು ಎಂದು ಪತ್ರದಲ್ಲಿ ತಿಳಿಸಲಾಗಿದೆ.
ಆಪರೇಷನ್ ಥಿಯೇಟರ್‌ಗಳಲ್ಲಿ ರೋಗಿಗಳ ಸುರಕ್ಷತೆಯೇ ಮುಖ್ಯ. ಹೀಗಿರುವಾಗ ವಿದ್ಯಾರ್ಥಿನಿಯರ ಬೇಡಿಕೆಯನ್ನು ಸದ್ಯಕ್ಕೆ ಒಪ್ಪಲು ಸಾಧ್ಯವಿಲ್ಲ. ಈ ಬಗ್ಗೆ ಚರ್ಚಿಸಲು ಸಮಿತಿ ರಚಿಸಲಾಗಿದ್ದು, ಮುಂದಿನ 10 ದಿನಗಳಲ್ಲಿ ನಿರ್ಧಾರ ಕೈಗೊಳ್ಳಲಿದೆ ಎಂದು ಕಾಲೇಜಿನ ಪ್ರಾಶುಂಪಾಲೆ ಡಾ.ಲಿನೆಟ್ ಮೋರಿಸ್ ಮಾಧ್ಯಮಗಳಿಗೆ ತಿಳಿಸಿದ್ದಾರೆ.