Wednesday, June 29, 2022

Latest Posts

ಗಣೇಶೋತ್ಸವಕ್ಕೆ ಅನುಮತಿ ನೀಡುವ ವಿಚಾರ: ಸೆಪ್ಟೆಂಬರ್ 5ಕ್ಕೆ ಅಂತಿಮ ತೀರ್ಮಾನ ಎಂದ ಅಶೋಕ್

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
……………………………………………

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ಕೊರೋನಾ ನಡುವೆ ಈ ಬಾರಿ ಗಣೇಶೋತ್ಸವ ಆಚರಣೆಗೆ ಷರತ್ತುಬದ್ಧ ಅನುಮತಿ ನೀಡುವ ವಿಚಾರಕ್ಕೆ ಸಂಬಂಧಿಸಿದಂತೆ ಸೆ. 5 ರಂದು ಸಿಎಂ ಅಧ್ಯಕ್ಷತೆಯಲ್ಲಿ ವಿಶೇಷ ಸಭೆ ನಡೆಸಲಾಗುವುದು ಎಂಬುದಾಗಿ ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದ್ದಾರೆ.
ಈ ಕುರಿತಂತೆ ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ನೇತೃತ್ವದಲ್ಲಿ ನಡೆದಂತ ತಾಂತ್ರಿಕ ತಜ್ಞರ ಸಭೆಯ ಬಳಿಕ ಸಭೆಯ ನಿರ್ಧಾರಗಳನ್ನು ಸುದ್ದಿಗಾರರೊಂದಿಗೆ ಮಾತನಾಡಿ ಮಾಹಿತಿ ನೀಡಿದ ಕಂದಾಯ ಸಚಿವ ಆರ್.ಅಶೋಕ್ ಅವರು, ರಾಜ್ಯದಲ್ಲಿ ಕೊರೋನಾ ಭೀತಿಯ ನಡುವೆಯೂ ಗಣೇಶ ಹಬ್ಬ ಆಚರಣೆಗೆ ಅವಕಾಶ ನೀಡುವ ಸಂಬಂಧ ಮುಕ್ಕಾಲು ಗಂಟೆ ಇಂದಿನ ಸಭೆಯಲ್ಲಿ ಚರ್ಚಿಸಲಾಯಿತು. ಕೊರೋನಾ ನಿಯಂತ್ರಣ ಕ್ರಮಗಳೊಂದಿಗೆ ಅನುಮತಿ ನೀಡುವ ಕುರಿತಂತೆ ಮತ್ತೆ ಸೆಪ್ಟೆಂಬರ್ ೫ರಂದು ಮುಖ್ಯಮಂತ್ರಿಯವರ ನೇತೃತ್ವದಲ್ಲಿ ಸಭೆ ನಡೆಸಲಾಗುತ್ತದೆ. ಆ ಸಭೆಯಲ್ಲಿ ಅಂತಿಮ ನಿರ್ಧಾರ ಕೈಗೊಳ್ಳಲಾಗುತ್ತದೆ.
ಕೇರಳದಲ್ಲಿ ಓಣಂ ಸಂದರ್ಭದಲ್ಲಿಯೇ ಕೊರೋನಾ ಪ್ರಕರಣ ಸಂಖ್ಯೆ ಹೆಚ್ಚಾದ ಹಿನ್ನಲೆಯಲ್ಲಿ ಗಣೇಶ ಹಬ್ಬಕ್ಕೆ ಕೊರೋನಾ ನಿಯಂತ್ರಣ ಕ್ರಮಗಳೊಂದಿಗೆ ಅನುಮತಿಸೋದಕ್ಕೆ ಚರ್ಚಿಸಿ ನಿರ್ಧಾರ ಪ್ರಕಟಿಸಲಾಗುತ್ತದೆ ಎಂದು ಹೇಳಿದರು.

 

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss