ಹೆರಿಗೆ ಬಳಿಕ ಮಗು ದತ್ತು ನೀಡಲು ಅವಕಾಶ: ಗರ್ಭಿಣಿ ವಿದ್ಯಾರ್ಥಿನಿ ಪ್ರಕರಣದಲ್ಲಿ ಮಹತ್ವದ ತೀರ್ಪು ನೀಡಿದ ಸುಪ್ರೀಂ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ವಿದ್ಯಾರ್ಥಿನಿ ಗರ್ಭಿಣಿಯಾಗಿದ್ದ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ.ಈಗಾಗಲೇ 29 ವಾರಗಳು ತುಂಬಿರುವ ಕಾರಣ ತಾಯಿ ಮತ್ತು ಭ್ರೂಣದ ಹಿತದೃಷ್ಟಿಯಿಂದ ಗರ್ಭಪಾತಕ್ಕೆ ನಿರಾಕರಿಸಲಾಗಿದೆ.

ಆಕೆ ಗರ್ಭಪಾತ ಮಾಡಿಸಿಕೊಳ್ಳಲು ತನಗೆ ಅನುಮತಿ ನೀಡಬೇಕೆಂದು ಕೋರಿ ವಿದ್ಯಾರ್ಥಿನಿ ಅರ್ಜಿ ಸಲ್ಲಿಸಿದ್ದಾಳೆ . ಇದರ ವಿಚಾರಣೆ ವೇಳೆ ತಾಯಿ ಮತ್ತು ಭ್ರೂಣದ ಹಿತದೃಷ್ಟಿಯಿಂದ ಗರ್ಭಪಾತಕ್ಕೆ ನಿರಾಕರಿಸಲಾಗಿದ್ದು, ಆದರೆ ಮಗು ಹೆತ್ತ ಬಳಿಕ ದತ್ತು ನೀಡಬಹುದು ಎಂದು ನ್ಯಾಯಪೀಠ ತಿಳಿಸಿದೆ.

ಸಂತ್ರಸ್ತೆ ವಿದ್ಯಾರ್ಥಿನಿಯಿಂದ ಯಾವುದೇ ಶುಲ್ಕ ಪಡೆಯದೆ ಎಲ್ಲ ಅಗತ್ಯ ಸೌಲಭ್ಯಗಳು ಲಭ್ಯವಾಗುವಂತೆ ನೋಡಿಕೊಳ್ಳಬೇಕು ಹಾಗೂ ಆಕೆಯ ಗೌಪ್ಯತೆಯನ್ನು ಕಾಪಾಡಿಕೊಳ್ಳಬೇಕು ಎಂದು ದೆಹಲಿಯ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ ನಿರ್ದೇಶಕರಿಗೆ ಸೂಚಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!