ಆಗುಂಬೆ ಘಾಟಿಯಲ್ಲಿ ಭಾರೀ ವಾಹನ ಸಂಚಾರಕ್ಕೆ ಅನುವು

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ರಾಷ್ಟ್ರೀಯ ಹೆದ್ದಾರಿ 169 ಎ ತೀರ್ಥಹಳ್ಳಿ-ಮಲ್ಪೆ ರಸ್ತೆಯ ಆಗುಂಬೆ ಘಾಟಿಯಲ್ಲಿ ಭಾರಿ ವಾಹನಗಳ ಸಂಚಾರವನ್ನು ನಿಷೇಧಿಸಿ ಹೊರಡಿಸಿದ್ದ ಆದೇಶವನ್ನು ಹಿಂಪಡೆದು, ಭಾರೀ ವಾಹನಗಳ ಸಂಚಾರಕ್ಕೆ ಸದ್ರಿ ಮಾರ್ಗದಲ್ಲಿ ಅನುವು ಮಾಡಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ಆದೇಶಿಸಿದ್ದಾರೆ.

ಆಗುಂಬೆ ಘಾಟ್ ನ 6, 7 ಮತ್ತು 11 ನೇ ತಿರುವಿನಲ್ಲಿ ಭಾರಿ ಮಳೆಯಿಂದಾಗಿ ಮತ್ತು ಭಾರೀ ವಾಹನಗಳ ಓಡಾಟದಿಂದ ಸಣ್ಣ ಬಿರುಕುಗಳು ಹಾಗೂ ಅಲ್ಲಲ್ಲಿ ರಸ್ತೆ ಕುಸಿತ ಕಂಡು ಬಂದ ಹಿನ್ನೆಲೆ ಸೆ.15 ರವರೆಗೆ ಭಾರೀ ವಾಹನ ಸಂಚಾರ ನಿಷೇಧ ಹೇರಲಾಗಿತ್ತು.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!