CINE| ಪತ್ನಿ ಹುಟ್ಟುಹಬ್ಬವನ್ನು ಲಂಡನ್‌ನಲ್ಲಿ ಅದ್ದೂರಿಯಾಗಿ ಆಚರಿಸಿದ ನಟ ಅಲ್ಲು ಅರ್ಜುನ್!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಸೆಪ್ಟೆಂಬರ್ 29ರಂದು ಅಲ್ಲು ಅರ್ಜುನ್ ಅವರ ಪತ್ನಿ ಸ್ನೇಹಾ ರೆಡ್ಡಿ ಅವರ ಹುಟ್ಟುಹಬ್ಬವನ್ನು ಲಂಡನ್‌ನಲ್ಲಿ ಅದ್ಧೂರಿಯಾಗಿ ಆಚರಿಸಿದರು. ತಮ್ಮ ಇನ್‌ಸ್ಟಾಗ್ರಾಮ್ ಸ್ಟೋರಿಯಲ್ಲಿ ತಮ್ಮ ಪತ್ನಿಯ ಹುಟ್ಟುಹಬ್ಬದಂದು ಶುಭ ಹಾರೈಸುವ ಹಲವಾರು ಪೋಸ್ಟ್‌ಗಳನ್ನು ಹಂಚಿಕೊಂಡಿದ್ದಾರೆ.

ಸಂಪೂರ್ಣವಾಗಿ ಗುಲಾಬಿ ಹೂಗಳಿಂದ ತುಂಬಿದ್ದ ಬೋರ್ಡ್ ನ ಮಧ್ಯದಲ್ಲಿ ಬನ್ನಿ ಕನ್ನಡಿ ಮಾಡಿ ಪತ್ನಿ ಜೊತೆ ಸೆಲ್ಫಿ ವಿಡಿಯೋ ಮಾಡಿದ್ದಾರೆ. ಸ್ನೇಹಾ ಜೊತೆ ಬನ್ನಿ ಕೇಕ್ ಕತ್ತರಿಸುತ್ತಿರುವ ಫೋಟೋವನ್ನು ಸ್ನೇಹಾ ತಮ್ಮ ಇನ್ಸ್ಟಾಗ್ರಾಮ್ ಸ್ಟೋರಿಯಲ್ಲಿ ಪೋಸ್ಟ್ ಮಾಡಿದ್ದಾರೆ.

ಅಲ್ಲು ಅರ್ಜುನ್ ಮತ್ತು ಸ್ನೇಹಾ ಹಂಚಿಕೊಂಡ ಹಲವು ಫೋಟೋಗಳು ವೈರಲ್ ಆಗಿದೆ. ಅಭಿಮಾನಿಗಳು, ಅನೇಕ ಸೆಲೆಬ್ರಿಟಿಗಳು ಮತ್ತು ನೆಟ್ಟಿಗರು ಸ್ನೇಹಾ ರೆಡ್ಡಿ ಅವರ ಹುಟ್ಟುಹಬ್ಬದಂದು ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ಶುಭ ಹಾರೈಸಿದ್ದಾರೆ.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!