ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಲ್ಲು ಅರ್ಜುನ್ ಹಾಗೂ ರಶ್ಮಿಕಾ ಮಂದಣ್ಣ ನಟನೆಯ ‘ಪುಷ್ಪ 2’ ರಿಲೀಸ್ಗೆ ದಿನಗಣನೆ ಶುರುವಾಗಿದೆ. ಇನ್ನೇನು 10 ದಿನಗಳಲ್ಲಿ ಸಿನಿಮಾ ರಿಲೀಸ್ ಆಗಲಿದೆ. ಅದಕ್ಕೂ ಮೊದಲೇ ಅಭಿಮಾನಿಗಳು ಸಿನಿಮಾನ ಸ್ವಾಗತಿಸಲು ಎಲ್ಲ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದ್ದಾರೆ. ಈ ಸಿನಿಮಾಗಾಗಿ ಅಭಿಮಾನಿಗಳು ದೊಡ್ಡ ದೊಡ್ಡ ಕೌಟಟ್ ನಿರ್ಮಾಣ ಮಾಡುತ್ತಿದ್ದಾರೆ. ಈಗ ಈ ವಿಚಾರದಲ್ಲಿ ಫ್ಯಾನ್ಸ್ ದಾಖಲೆಯನ್ನೇ ಬರೆದಿದ್ದಾರೆ. ಬರೋಬ್ಬರಿ 108 ಅಡಿಯ ಕಟೌಟ್ ನಿಲ್ಲಿಸಿ ಎಲ್ಲರಲ್ಲೂ ಫ್ಯಾನ್ಸ್ ಅಚ್ಚರಿ ಮೂಡಿಸಿದ್ದಾರೆ.
ಅಲ್ಲು ಅರ್ಜುನ್ ಅವರಿಗೆ ದೊಡ್ಡ ಅಭಿಮಾನಿ ಬಳಗ ಸೃಷ್ಟಿ ಆಗಿದೆ. ಅವರ ನಟನೆಯ ಸಿನಿಮಾಗಳು ರಿಲೀಸ್ ಆಗುತ್ತವೆ ಎಂದರೆ ಫ್ಯಾನ್ಸ್ ಅಭಿಮಾನದಿಂದ ಕಾಯುತ್ತಾರೆ. ಈಗ ಅಲ್ಲು ಅರ್ಜುನ್ ಅವರು ‘ಪುಷ್ಪ 2’ ರಿಲೀಸ್ಗಾಗಿ ಕಾಯುತ್ತಿದ್ದಾರೆ. ಈ ಚಿತ್ರಕ್ಕಾಗಿ ವಿವಿಧ ಕಡೆಗಳಲ್ಲಿ ತೆರಳಿ ಪ್ರಚಾರ ಮಾಡುತ್ತಿದ್ದಾರೆ. ಅವರ ಅಭಿಮಾನಿಗಳು ಈಗ ದೊಡ್ಡ ದೊಡ್ಡ ಕಟೌಟ್ ನಿಲ್ಲಿಸುತ್ತಿದ್ದಾರೆ.
ತೆಲುಗು ಸಿನಿಮಾದಲ್ಲಿ ಅನೇಕ ಸ್ಟಾರ್ ಹೀರೋಗಳು ಬಂದು ಹೋಗಿದ್ದಾರೆ. ಅವರ ಅಭಿಮಾನಿಗಳು ಈಗಾಗಲೇ ಸಾಕಷ್ಟು ಕಟೌಟ್ಗಳನ್ನು ನಿರ್ಮಾಣ ಮಾಡಿದ್ದರು. ಆದರೆ, ಇಷ್ಟು ದೊಡ್ಡ ಮಟ್ಟದ ಕಟೌಟ್ ನಿರ್ಮಾಣ ಆಗಿರಲಿಲ್ಲ. ಇದೇ ಮೊದಲ ಬಾರಿಗೆ ಅಲ್ಲು ಅರ್ಜುನ್ ಅವರ ಬರೋಬ್ಬರಿ 108 ಅಡಿ ಎತ್ತರ ಹಾಗೂ 16 ಅಡಿ ಅಗಲದ ಕೌಟೌಟ್ ನಿರ್ಮಾಣ ಮಾಡಲಾಗಿದೆ. ವಿಶಾಖಪಟ್ಟಣದ ಸಂಗಮ್ ಥಿಯೇಟರ್ನಲ್ಲಿ ಈ ಕಟೌಟ್ ತಲೆ ಎತ್ತಿದೆ.