ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………
ಹೊಸದಿಗಂತ ಆನ್ಲೈನ್ ಡೆಸ್ಕ್:
ನಾಲ್ಕು ವರ್ಷದ ಅಲ್ಲು ಅರ್ಜುನ್ ಪುತ್ರಿ ಚಿತ್ರರಂಗಕ್ಕೆ ಎಂಟ್ರಿ ನೀಡುತ್ತಿದ್ದಾಳೆ.
ಸಮಂತಾ ಅಭಿನಯದ ಶಾಕುಂತಲಂ ಸಿನಿಮಾದಲ್ಲಿ ಭರತನ ಪಾತ್ರಕ್ಕೆ ಅಲ್ಲು ಅರ್ಜುನ್ ಪುತ್ರಿ ಅಲ್ಲು ಅರ್ಹಾ ಬಣ್ಣ ಹಚ್ಚಲಿದ್ದಾಳೆ.
ನನ್ನ ಮಗಳಿಗೆ ಮೊದಲ ಅವಕಾಶ ನೀಡಿರುವುದಕ್ಕೆ ನಿರ್ದೇಶಕ ಗುಣಶೇಖರ್ ಅವರಿಗೆ ಅಲ್ಲು ಅರ್ಜುನ್ ಧನ್ಯವಾದ ತಿಳಿಸಿದ್ದಾರೆ. ಸಮಂತಾ ಜೊತೆ ನನ್ನ ಮಗಳು ಅಭಿನಯಿಸುವುದು ಖುಷಿ ತಂದಿದೆ ಎಂದು ಅಲ್ಲು ಅರ್ಜುನ್ ಹೇಳಿದ್ದಾರೆ.