ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೇಂದ್ರ ಸರ್ಕಾರವು ರಾಷ್ಟ್ರೀಯ ಭದ್ರತಾ ಸಲಹಾ ಮಂಡಳಿಯನ್ನು ಪರಿಷ್ಕರಿಸಿದೆ. ಸಂಶೋಧನೆ ಮತ್ತು ವಿಶ್ಲೇಷಣಾ ವಿಭಾಗದ ಮಾಜಿ ಮುಖ್ಯಸ್ಥ ಅಲೋಕ್ ಜೋಶಿ ಅವರನ್ನು ರಾಷ್ಟ್ರೀಯ ಭದ್ರತಾ ಸಲಹಾ ಮಂಡಳಿಯ ಮುಖ್ಯಸ್ಥರನ್ನಾಗಿ ನೇಮಿಸಲಾಗಿದೆ. ಮಂಡಳಿಗೆ ಇನ್ನೂ ಆರು ಸದಸ್ಯರನ್ನು ಕೂಡ ಸೇರಿಸಿಕೊಳ್ಳಲಾಗಿದೆ.
ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಸಿಸಿಎಸ್ ಸಭೆಯ ಜೊತೆಗೆ, ರಾಜಕೀಯ ವ್ಯವಹಾರಗಳ ಸಂಪುಟ ಸಮಿತಿ ಮತ್ತು ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿ ಎರಡು ಹೆಚ್ಚುವರಿ ಸಮಿತಿ ಸಭೆಗಳನ್ನು ಪ್ರಧಾನ ಮಂತ್ರಿಯವರ ನಿವಾಸದಲ್ಲಿ ಕರೆಯಲಾಗಿದ್ದು. ಇಂದು ಮಧ್ಯಾಹ್ನ 3:00 ಗಂಟೆಗೆ ಸಂಪುಟ ಸಭೆ ನಡೆಯಲಿದೆ.