ಹೊಸದಿಗಂತ ಡಿಜಿಟಲ್ ಡೆಸ್ಕ್:
ಕರ್ನಾಟಕ ರಾಜ್ಯ ಪೊಲೀಸ್ ಮಹಾನಿರ್ದೇಶಕರಾಗಿ ಅಲೋಕ್ ಮೋಹನ್ (Alok Mohan) ಅವರನ್ನು ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.
ಕರ್ನಾಟಕದ ಡಿಜಿ-ಐಜಿಪಿಯಾಗಿದ್ದ ಪ್ರವೀಣ್ ಸೂದ್ ಅವರು ಸಿಬಿಐ ನಿರ್ದೇಶಕರಾಗಿ ನೇಮಕಗೊಂಡಿದ್ದರು. ಅವರಿಂದ ತೆರವಾಗಿದ್ದ ಸ್ಥಾನಕ್ಕೆ ಅಲೋಕ್ ಮೋಹನ್ ಅವರಿಗೆ ಹೆಚ್ಚುವರಿ ಹೊಣೆ ನೀಡಲಾಗಿತ್ತು.
ಈಗ ಆ ಸ್ಥಾನಕ್ಕೆ ಅವರನ್ನೇ ನೇಮಿಸಿ ಸರ್ಕಾರ ಆದೇಶಿಸಿದೆ.